ಮೈಸೂರು: ಇಲ್ಲಿನ ಎಸಿಎಫ್ ಶಿವಶಂಕರ್ ಅವರ ನಿವಾಸ ಕಚೇರಿ ಸೇರಿದಂತೆ ಒಟ್ಟು 5 ಕಡೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ಎಸಿಬಿ ಎಸ್ ಪಿ ಸುಮನ್ ಡಿ ಪನೆಕರ್ ಹಾಗೂ ಡಿವೈಎಸ್ ಪಿ ಎಚ್ ಪರಶುರಾಮಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ.

ಅರಣ್ಯ ಇಲಾಖೆಯ ಸ್ಯಾಂಡಲ್ ಡಿಪೊದಲ್ಲಿ ಇವರು ಎಸಿಎಫ್ ಆಗಿದ್ದಾರೆ. ಇವರ ನಿವಾಸ, ಕಚೇರಿ, ಸಂಬಂಧಿಕರು ಹಾಗೂ ಸ್ನೇಹಿತರ ನಿವಾಸ, ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿರುವ ಇವರ ಮನೆಯ ಮೇಲೆ ಎಸಿಬಿಯ 40ಕ್ಕೂ ಹೆಚ್ಚಿನ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಕುರಿತ ದೂರಿನ ಅನ್ವಯ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.