ಮೈಸೂರು: ‘ಬಿಜೆಪಿಗರೇ, ನಾನು ರೌಡಿಶೀಟರ್, ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ?’ ಎಂದು ಬರೆದಿದ್ದ ಬ್ಯಾನರ್ ಹಿಡಿದು, ಮಂಜು ಅಲಿಯಾಸ್ ಪಾನಿಪುರಿ ಮಂಜ ಎನ್ನುವವರು ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ಥಳಿ ಎದುರು ಶನಿವಾರ ಸಾರ್ವಜನಿಕರ ಗಮನಸೆಳೆದರು.

ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಸ್ವಾಮೀಜಿ, ಕನಕದಾಸ, ವಾಲ್ಮೀಕಿ, ಅಂಬೇಡ್ಕರ್ ಚಿತ್ರ ಹಾಕಿದ್ದ ಬ್ಯಾನರ್ ಹಿಡಿದಿದ್ದರು. ಗಣೇಶ ನಗರದ ನಿವಾಸಿಯಾದ ಅವರು, 2013ರಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದರು ಎಂದು ತಿಳಿದುಬಂದಿದೆ.

ಅವರನ್ನು ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ಸಂಬಂಧ ಉದಯಗಿರಿ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

‘ರಾಜ್ಯದಲ್ಲಿ ಸಾಕಷ್ಟು ಮಂದಿ ರೌಡಿಶೀಟರ್‌ಗಳು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಹೀಗಾಗಿ, ನನ್ನನ್ನೂ ಸೇರಿಸಿಕೊಳ್ಳುವಂತೆ ಗಮನಸೆಳೆದಿದ್ದೇನೆ’ ಎಂದು ಮಂಜು ‘ಪ್ರಜಾವಾಣಿ’ಗೆ ತಿಳಿಸಿದರು.

ಇವನ್ನೂ ಓದಿ...

RSS ನಾಯಕರು ಬೊಮ್ಮಾಯಿಗೆ ರೌಡಿಮೋರ್ಚಾ ಕಟ್ಟಲು ಸಲಹೆ ನೀಡಿದ್ದಾರೆಯೇ: ಸಿದ್ದರಾಮಯ್ಯ

ಡಿಕೆಶಿ ಪುಡಿ ರೌಡಿ, ನಲಪಾಡ್ ಮರಿ ರೌಡಿ; ಕಾಂಗ್ರೆಸ್ಗೆ ನೈತಿಕತೆಯಿಲ್ಲ: ಬಿಜೆಪಿ

ಬೊಮ್ಮಾಯಿ ಅವರೇ, ರೌಡಿರಾಜ್ಯ ಕಟ್ಟಲು ಹೊರಟಿದ್ದೀರಾ: ಕಾಂಗ್ರೆಸ್ ಪ್ರಶ್ನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.