ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು | ಮಾದಕ ಸೇವನೆ: ಪೋಸ್ಟರ್ ನೀಡಿ ಜಾಗೃತಿ

Published 25 ಜೂನ್ 2024, 15:24 IST
Last Updated 25 ಜೂನ್ 2024, 15:24 IST
ಅಕ್ಷರ ಗಾತ್ರ

ಮೈಸೂರು: ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದ ಕಾಲೇಜುಗಳಲ್ಲಿ ಮಾದಕ ದ್ರವ್ಯ ಸೇವನೆ, ಅಕ್ರಮ ಮಾದಕ ವಸ್ತು ಕಳ್ಳಸಾಗಣೆ ವಿರೋಧ ಕುರಿತು ಜಾಗೃತಿಯ ಪೋಸ್ಟರ್ ನೀಡಲಾಯಿತು.

ನಗರದ ಸದ್ವಿದ್ಯಾ ಕಾಲೇಜು, ಮರಿಮಲ್ಲಪ್ಪ ಕಾಲೇಜು, ಟಿಟಿಎಲ್ ಕಾಲೇಜು, ಶಾರದಾ ವಿಲಾಸ ಕಾಲೇಜು, ಡಿ.ಬನುಮಯ್ಯ ಕಾಲೇಜುಗಳಿಗೆ ಪದಾಧಿಕಾರಿಗಳು ಭೇಟಿ ನೀಡಿ ಮಾದಕ ದ್ರವ್ಯ ಸೇವನೆಯಿಂದ ಆಗುವ ದುಷ್ಪರಿಣಾಮ ಕುರಿತು ಅರಿವು ಮೂಡಿಸಿದರು.

ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮಾತನಾಡಿ, ‘ಮಾದಕ ದ್ರವ್ಯ ಸೇವನೆ, ಅಕ್ರಮ ಸಾಗಣೆಯಿಂದ ಸಮಾಜದ ಮೇಲಾಗುವ ಹಾನಿ ಮಾರಣಾಂತಿಕವಾಗಿದೆ. ಇದರ ದುಷ್ಪರಿಣಾಮದ ಕುರಿತು ಅರಿವು ಮೂಡಿಸಿ ತಡೆಯುವ ಉದ್ದೇಶದಿಂದ 1989ರಿಂದ ಪ್ರತಿ ವರ್ಷ ಜೂನ್ 26ರಂದು ಅಂತರರಾಷ್ಟ್ರೀಯ ಮಾದಕ ದ್ರವ್ಯ ಸೇವನೆ, ಅಕ್ರಮ ಸಾಗಣೆ ವಿರೋಧಿ ದಿನ ಆಚರಿಸಲಾಗುತ್ತಿದೆ’ ಎಂದರು.

‘ಈ ದಿನಾಚರಣೆಯ ಉದ್ದೇಶ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಗಳ ಕುರಿತು ವಿದ್ಯಾರ್ಥಿಗಳು, ಯುವಜನರು ಅರ್ಥ ಮಾಡಿಕೊಳ್ಳಬೇಕು. ಇದರಿಂದ ಎದುರಾಗುವ ಸಮಸ್ಯೆ ಮತ್ತು ದುಷ್ಪರಿಣಾಮ ಕುರಿತು ವಿದ್ಯಾರ್ಥಿ ಹಂತದಲ್ಲೇ ಅರಿವು ಮೂಡಿಸುವುದರಿಂದ ತಡೆಯಲು ಸಾಧ್ಯ’ ಎಂದು ತಿಳಿಸಿದರು.

ಟ್ರಸ್ಟ್ ಪದಾಧಿಕಾರಿಗಳಾದ ಅಜಯ್ ಶಾಸ್ತ್ರಿ, ರವಿಚಂದ್ರ, ಜಿ.ರಾಘವೇಂದ್ರ, ಎಸ್.ಎನ್.ರಾಜೇಶ್, ರಾಕೇಶ್, ದುರ್ಗಾ ಪ್ರಸಾದ್, ಸಚಿನ್ ನಾಯಕ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT