ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕೃತ‌ ಘೋಷಣೆಗೂ ಮುನ್ನವೇ ಸಂಸದ ಯದುವೀರ್ ಹೆಸರಿನ ಪ್ಲೇಟ್‌ಗೆ ಪೂಜೆ

Published 4 ಜೂನ್ 2024, 6:45 IST
Last Updated 4 ಜೂನ್ 2024, 6:45 IST
ಅಕ್ಷರ ಗಾತ್ರ

ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಮಾನಿಗಳು ಮಂಗಳವಾರ ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಫಲಕಕ್ಕೆ ಪೂಜೆ ಮಾಡಿಸಿದ್ದರು.ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆಗೂ ಮುನ್ನವೇ, ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಮಾನಿಗಳು ಮಂಗಳವಾರ ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಫಲಕಕ್ಕೆ ಪೂಜೆ ಮಾಡಿಸಿದ್ದಾರೆ.

'ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದರು' ಎಂದು ಬರೆದಿರುವ ಬೋರ್ಡ್‌ಗೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮಾಡಿಸಿದ್ದಾರೆ. ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದೆ.

ಕ್ಷೇತ್ರದ ಮತ ಎಣಿಕೆ ಮುಂದುವರಿದಿದ್ದು, ಯದುವೀರ್ ಈವರೆಗೆ 99,197 ಮತಗಳಿಂದ ಭಾರಿ ಮುನ್ನಡೆ ಗಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT