ಮೈಸೂರು: ‘ಜಿಲ್ಲಾಡಳಿತದಿಂದ ಏ.5ರಂದು ಬಾಬು ಜಗಜೀವನ್ ರಾಂ ಹಾಗೂ ಏ.14ರಂದು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಎಲ್ಲಾ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಗಜೀವನ್ ರಾಂ ಹಾಗೂ ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಅವರ ಚಿಂತನೆ ಹಾಗೂ ಆದರ್ಶಗಳು ಸರ್ವಕಾಲಿಕವಾಗಿ ಪ್ರತಿಯೊಬ್ಬರಿಗೂ ಮಾದರಿಯಾಗಿವೆ. ಸಾರ್ವಜನಿಕರು ಎರಡೂ ಜಯಂತಿ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಕೋರಿದರು.

‘5ರಂದು ಬೆಳಿಗ್ಗೆ ಬಾಬೂಜಿ ಪುತ್ಥಳಿಗೆ ಹಾಗೂ 14ರಂದು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದ ನಂತರ, ಮಹನೀಯರ ಸಂದೇಶ ಸಾರುವ ಸ್ಥಬ್ಧಚಿತ್ರದೊಂದಿಗೆ ಮೆರವಣಿಗೆ ನಡೆಯಲಿದೆ. ಕಲಾತಂಡಗಳು ಪಾಲ್ಗೊಂಡು ಮೆರಗು ನೀಡಲಿವೆ. ಬಳಿಕ, ವೇದಿಕೆ ಸಮಾರಂಭವನ್ನು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದು’ ಎಂದರು.

ಹಾಜರಾತಿ ಕಡ್ಡಾಯ:

‘ಎರಡೂ ಜಯಂತಿಗಳ ಆಚರಣೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸುವುದು ಕಡ್ಡಾಯವಾಗಿದೆ. ಕಾರ್ಯಕ್ರಮ ಸ್ಥಳದಲ್ಲಿ ಹಾಜರಾತಿ ಪಡೆದುಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಅಂಬೇಡ್ಕರ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಮಾಡಿದ ಮುಖ್ಯ ಭಾಷಣಗಳ ಭಾಗಗಳನ್ನು ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಬೇಕು. ಉತ್ತಮವಾಗಿ ಪ್ರಸ್ತುತಪಡಿಸುವ ಐವರಿಂದ ಜಯಂತಿ ದಿನದಂದು ಭಾಷಣ ಮಾಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಇಬ್ಬರೂ ಮಹನೀಯರ ಸಂದೇಶಗಳುಳ್ಳ ಗಾಯನ, ನಾಟಕ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕ್ರಿಕೆಟ್ ಮತ್ತು ಥ್ರೋಬಾಲ್ ಟೂರ್ನಿ ಆಯೋಜಿಸಲಾಗಿದೆ’ ಎಂದರು.

ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿಸಿಪಿ ಡಾ.ಹರ್ಷಾ ಪ್ರಿಯಾವಂದ, ಮಹಾನಗರ ಪಾಲಿಕೆ ಉಪ ಆಯುಕ್ತೆ ವೀಣಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ, ಮುಖಂಡರಾದ ಪುರುಷೋತ್ತಮ್, ರಾಜು ಆಶೋಕಪುರಂ ಮೊದಲಾದವರು ಪಾಲ್ಗೊಂಡಿದ್ದರು

ಅಂಬೇಡ್ಕರ್, ಬಾಬೂಜಿ ಜಯಂತಿ: ಆಟೋಟ, ನಾಟಕ

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮತ್ತು ಬಾಬು ಜಗಜೀವನರಾಂ ಅವರ 119ನೇ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ವಿವಿಧ ಇಲಾಖೆಗಳ ಪುರುಷ ನೌಕರರಿಗೆ ‘ಅಂಬೇಡ್ಕರ್ ಕಪ್’ ಟೆನಿಸ್ಬಾಲ್ ಕ್ರಿಕೆಟ್ ಟೂರ್ನಿ’ ಮತ್ತು ಮಹಿಳಾ ನೌಕರರಿಗೆ ‘ರಾಮಾಬಾಯಿ ಕಪ್’ ಥ್ರೋಬಾಲ್ ಟೂರ್ನಿಯನ್ನು ಮೈಸೂರು ವಿಶ್ವವಿದ್ಯಾಲಯದ ಕ್ರೀಡಾಂಗಣಗಳಲ್ಲಿ ಆಯೋಜಿಸಲಾಗಿದೆ.

ವಿದ್ಯಾರ್ಥಿಗಳಿಗಾಗಿ ಬಿ.ಆರ್.ಅಂಬೇಡ್ಕರ್ ಹಾಗೂ ಮಹಿಳಾ ಸಬಲೀಕರಣ ವಿಷಯದ ಕುರಿತು ಪ್ರಬಂಧ ಸ್ಪರ್ಧೆ, ಸಮೂಹ ಗೀತ ಗಾಯನ ಸ್ಪರ್ಧೆ, ಅಂಬೇಡ್ಕರ್ ಅವರು ವಿವಿಧೆಡೆ ಮಾಡಿದ ಭಾಷಣಗಳನ್ನು ವಿದ್ಯಾರ್ಥಿಗಳು ಪುನರ್ ಪ್ರಸ್ತುತಪಡಿಸುವುದು, ರಕ್ತ ದಾನ ಶಿಬಿರ, ವಿವಿಧ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ ನಡೆಸಲಾಗುವುದು’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ತಿಳಿಸಿದ್ದಾರೆ.

‘ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನೌಕರರಿಂದ ಪಿ.ಲಂಕೇಶ್ ಅವರ ಕಥೆ ಆಧಾರಿತ ‘ಮುಟ್ಟಿಸಿಕೊಂಡವನು’ ನಾಟಕದ ಪ್ರದರ್ಶನವನ್ನೂ ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.