ಮೈಸೂರು: ‘ದೇಶಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಕೊಡುಗೆ ಅನನ್ಯವಾದುದು’ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗದ ಡಿಆರ್ಎಂ ಮುದಿತ್ ಮಿತ್ತಲ್ ಸ್ಮರಿಸಿದರು.

ಇಲ್ಲಿನ ರೈಲ್ವೆ ಮೈಸೂರು ವಿಭಾಗೀಯ ಕಚೇರಿಯ ಸಭಾಂಗಣದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮಾನತೆ, ನ್ಯಾಯ, ಸಾಮಾಜಿಕ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳ ಮೇಲೆ ಆಧಾರಿತವಾದ ಅವರ ಜೀವನ ಮತ್ತು ಆದರ್ಶಗಳು ದೇಶದ ಅನೇಕ ಪೀಳಿಗೆಗಳಿಗೆ ಸ್ಫೂರ್ತಿಯಾಗಿವೆ’ ಎಂದರು.

‘ಪ್ರಗತಿಶೀಲ ಮತ್ತು ಸಮ ಸಮಾಜದ ನಿರ್ಮಾಣದ ಕುರಿತು ಅಂಬೇಡ್ಕರ್ ಅವರ ದೃಷ್ಟಿಕೋನ ಇಂದಿಗೂ ಅತ್ಯಂತ ಪ್ರಸ್ತುತವಾಗಿದೆ’ ಎಂದು ಪ್ರತಿಪಾದಿಸಿದರು.

ಎಐಸಿಎಸ್ಟಿಆರ್ಇಎ ವಿಭಾಗೀಯ ಕಾರ್ಯದರ್ಶಿ ವಿ. ನಂದಶೇಖರ್ ಮಾತನಾಡಿ, ‘ಅಂಬೇಡ್ಕರ್ ನೇತೃತ್ವದಲ್ಲಿ ರೂಪುಗೊಂಡ ಬಲಿಷ್ಠ ಮತ್ತು ಪ್ರಗತಿಪರ ಸಂವಿಧಾನವು ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ದೃಢ ಮತ್ತು ಶಾಶ್ವತ ಅಡಿಪಾಯವನ್ನು ಹಾಕಿದೆ. ಪ್ರತಿಯೊಬ್ಬ ನಾಗರಿಕರ ಹಕ್ಕುಗಳು, ಗೌರವವನ್ನು ಅದು ರಕ್ಷಿಸುತ್ತಿದೆ’ ಎಂದರು.

ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ರೈಲ್ವೆ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.