ಮೈಸೂರು: ‘ತಾಲ್ಲೂಕಿನ ಇಲವಾಲ ಹೋಬಳಿಯ ಯಲಚಹಳ್ಳಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟ, ಸಾಧನೆ, ರಾಜತಾಂತ್ರಿಕತೆ ಮತ್ತು ತತ್ವಗಳನ್ನು ತಿಳಿಸಲು ಥೀಮ್ಪಾರ್ಕ್ (ಮ್ಯೂಸಿಯಂ) ನಿರ್ಮಾಣ ಮಾಡಲಾಗುವುದು’ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗದಲ್ಲಿ ಬುಧವಾರ ಯೋಜನೆ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳೊಡನೆ ಸಭೆ ನಡೆಸಿ ಮಾತನಾಡಿದ ಅವರು, ‘ಥೀಮ್ ಪಾಕ್೯ ಅಥವಾ ಮ್ಯೂಸಿಯಂ ನಿರ್ಮಾಣಕ್ಕೆ ಈಗಾಗಲೇ 10 ಎಕರೆ ಭೂಮಿಯನ್ನು ಕಾಯ್ದಿರಿಸಲಾಗಿದೆ. ಡಿ.ಪಿ.ಆರ್. ತಯಾರಿಸಿ ನೀಲಿನಕ್ಷೆಯೊಂದಿಗೆ ಮ್ಯೂಸಿಯಂ ನಿರ್ಮಾಣಕ್ಕೆ ಬೇಕಿರುವ ಅನುದಾನದೊಂದಿಗೆ ಯೋಜನೆ ಸಿದ್ಧವಾಗಬೇಕು’ ಎಂದು ಸೂಚಿಸಿದರು.

‘ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ದೇಶದ ಆರ್ಥಿಕತೆ, ನಿರುದ್ಯೋಗ, ನೀರಿನ ಕೊರತೆ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರವಿದೆ. ಅವುಗಳನ್ನು ಸಮಾನ್ಯ ಜನರಿಗೆ ಅರ್ಥವಾಗುವ ರೀತಿ ವಿಷಯಗಳನ್ನು ತಿಳಿಸಬೇಕು’ ಎಂದರು.

ಅನಾವರಣಗೊಳಿಸಿ:

‘ಬಾಬಾಸಾಹೇಬರ ಹುಟ್ಟಿನಿಂದ ಪರಿನಿರ್ವಾಣದವರೆಗೆ ಅವರ ಕಾಲಘಟ್ಟದ ಮುಖ್ಯ ಸಂಗತಿಗಳು ಸೇರಿದಂತೆ ಶಾಹೂಮಹಾರಾಜರು ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಚಿಂತನೆಗಳನ್ನೂ ಮ್ಯೂಸಿಯಂನಲ್ಲಿ ಅನಾವರಣಗೊಳಿಸಬೇಕು’ ಎಂದು ಸೂಚಿಸಿದರು.

‘ಮೈಸೂರು ಐತಿಹಾಸಿಕ ಪ್ರವಾಸಿ ತಾಣವಾಗಿದ್ದು, ಥೀಮ್ ಪಾರ್ಕ್ (ಮ್ಯೂಸಿಯಂ) ಹೆಚ್ಚಿನ ಜನರನ್ನು ಆಕರ್ಷಿಸುವ ಜೊತೆಗೆ ಹೊಸತನದಿಂದ ಕೂಡಿರಬೇಕು’ ಎಂದರು.

‘ಯೋಜನೆಯ ನೀಲಿನಕ್ಷೆ ತಯಾರಿಸುವ ಮೊದಲು, ಮುಖ್ಯ ವ್ಯಕ್ತಿಗಳಿಂದ ಮಾಹಿತಿ ಕ್ರೋಢೀಕರಿಸಬೇಕು. ಉತ್ತಮವಾಗಿ ಮೂಡಿ ಬರುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಪ್ರತಿಯೊಬ್ಬರಿಗೂ ಸಮಾಜಿಕ ನ್ಯಾಯ ನೀಡಲು ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಬಗ್ಗೆ ವಿಶ್ವದ ಹಲವು ಮಂದಿ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವೂ ಮ್ಯೂಸಿಯಂನಲ್ಲಿ ಅನಾವರಣವಾಗಬೇಕು. ಪ್ರತಿಯೊಂದು ವಿಷಯವೂ ಸಾಮಾನ್ಯ ಜನರಿಗೂ ಸುಲಭವಾಗಿ ತಿಳಿಯುವಂತೆ ಮಾಡಲು ನೋಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ)ದ ಆಯುಕ್ತ ಕೆ.ಆರ್.ರಕ್ಷಿತ್, ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನ ಮತ್ತು ವಿಸ್ತರಣ ಕೇಂದ್ರದ ಪ್ರೊ.ನರೇಂದ್ರಕುಮಾರ್, ಪ್ರೊ.ಜೆ. ಸೋಮಶೇಖರ್, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಲಹೆಗಾರ ಎಸ್. ತುಕಾರಾಂ ಪಾಲ್ಗೊಂಡಿದ್ದರು.

ಈ ಯೋಜನೆ ಅನುಷ್ಠಾನಕ್ಕೆ ಉದ್ದೇಶಿಸಿರುವ ಕುರಿತು ‘ಪ್ರಜಾವಾಣಿ’ಯಲ್ಲಿ 2025ರ ಡಿ.5ರಂದು ವಿಶೇಷ ವರದಿ ಪ್ರಕಟವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.