ಮೈಸೂರು: ‘ರಕ್ತದಾನವು ಒಬ್ಬರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ ಹೇಳಿದರು.

ನಗರದ ಜೆಎಸ್ಎಸ್ ಆಸ್ಪತ್ರೆಯಲ್ಲಿ ಈಚೆಗೆ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಸ್ತ್ರಚಿಕಿತ್ಸೆಯಲ್ಲಿ ರಕ್ತ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಾನದಿಂದ ಅನೀಮಿಯಾ ಮುಕ್ತ ಭಾರತ ಸಾಧ್ಯ’ ಎಂದರು.

ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಉಪಕುಲಪತಿ ಎಚ್. ಬಸವನಗೌಡಪ್ಪ, ‘ಎಲ್ಲರ ಗುರಿ ಮತ್ತು ಮೂಲ ಉದ್ದೇಶ ಸಂತೋಷ ಮತ್ತು ಆರೋಗ್ಯದಿಂದ ಜೀವಿಸುವುದು. ಉತ್ತಮ ಆರೋಗ್ಯಕ್ಕೆ ರಕ್ತವೂ ಒಂದು ಭಾಗ’ ಎಂದು ಹೇಳಿದರು.

ಜೆಎಸ್ಎಸ್ ಆಸ್ಪತ್ರೆಯ ನಿರ್ದೇಶಕ ಸಿ.ಪಿ.ಮಧು, ಜೆಎಸ್ಎಸ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಿ.ನಾರಾಯಣಪ್ಪ ಮಾತನಾಡಿದರು.

ಪೋಸ್ಟರ್ ಪ್ರದರ್ಶನ, ಚಿತ್ರಕಲಾ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹೆಚ್ಚು ಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.

ರಕ್ತಕೇಂದ್ರದ ಮುಖ್ಯಸ್ಥರಾದ ಪಿ.ಪಲ್ಲವಿ, ಪ್ಯಾಥಾಲಜಿ ವಿಭಾಗದ ಮುಖ್ಯಸ್ಥೆ ಶೀಲಾದೇವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.