ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಂಗನವಾಡಿ: ಅವಘಡ ತಪ್ಪಿಸಲು ಕ್ರಮ ಕೈಗೊಳ್ಳಿ’

Published 20 ಮಾರ್ಚ್ 2024, 16:07 IST
Last Updated 20 ಮಾರ್ಚ್ 2024, 16:07 IST
ಅಕ್ಷರ ಗಾತ್ರ

ಮೈಸೂರು: ‘ಅಂಗನವಾಡಿ ಕೇಂದ್ರಗಳಲ್ಲಿ ಅಡುಗೆ ಮತ್ತಿತರ ಕೆಲಸದ ಸಂದರ್ಭಗಳಲ್ಲಿ ಅವಘಡಗಳನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸಂಯುಕ್ತ ಅಕ್ಷರದಾಸೋಹ ಕಾರ್ಮಿಕರ ಸಂಘದ ಕಾರ್ಯದರ್ಶಿ ಸಂಧ್ಯಾ ಪಿ.ಎಸ್. ಒತ್ತಾಯಿಸಿದ್ದಾರೆ.

‘ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಪ್ರೌಢಶಾಲೆಯೊಂದರಲ್ಲಿ ಬಿಸಿಯೂಟ ಕಾರ್ಯಕರ್ತೆ ಗೌರಮ್ಮ ಎನ್ನುವವರು ಅಡುಗೆ ಮಾಡುವ ವೇಳೆ ಬಿಸಿಬೇಳೆ ಬಾತ್ ಚೆಲ್ಲಿ ತೀವ್ರವಾಗಿ ಸುಟ್ಟ ಗಾಯಗಳಾಗಿ ಮೃತಪಟ್ಟಿದ್ದಾರೆ. ಇತರ ಅಡುಗೆ ಸಹಾಯಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇದೇ ರೀತಿ ಲಕ್ಷಾಂತರ ಬಿಸಿ ಊಟ ಕಾರ್ಯಕರ್ತೆಯರು ಸೂಕ್ತ ಭದ್ರತೆ, ರಕ್ಷಣೆ ಇಲ್ಲದೆ ಯಾವುದೇ ಕಾರ್ಮಿಕ ಕಾಯ್ದೆಗೂ ಒಳಪಡದೇ ಕೆಲಸ ಮಾಡುತ್ತಿದ್ದಾರೆ. ಅತ್ಯಲ್ಪ ದುಡಿಮೆಯ ಹಣವನ್ನು ಗೌರವಧನದ ಹೆಸರಿನಲ್ಲಿ ಪಡೆಯುತ್ತಿದ್ದಾರೆ. ರಾಜ್ಯ ಕನಿಷ್ಠ ವೇತನ ಕಾಯ್ದೆಯ ಅನ್ವಯ ಬಿಸಿಯೂಟ ಕಾರ್ಯಕರ್ತೆಯರನ್ನು ಶೆಡ್ಯೂಲ್‌ಗೆ ಒಳಪಡಿಸಬೇಕು’ ಎಂದು ಕೋರಿದ್ದಾರೆ.

‘ಮೃತರ ಕುಟುಂಬಕ್ಕೆ ಕನಿಷ್ಠ ₹ 10 ಲಕ್ಷ ಪರಿಹಾರ ನೀಡಬೇಕು. ಗಾಯಗಳಾಗಿರುವ ಸಹಾಯಕಿಯರಿಗೆ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸಬೇಕು. ಗಾಯದ ತೀವ್ರತೆ ಪರಿಗಣಿಸಿ ಕನಿಷ್ಠ ₹ 1 ಲಕ್ಷ ಚೇತರಿಕೆ ಧನಸಹಾಯ ನೀಡಬೇಕು. ಈ ನೌಕರರ ಸುರಕ್ಷತೆಗೆ ಆದ್ಯತೆ ನೀಡಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT