ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜು: ತಾನ್ಯಾಗೆ ಚಿನ್ನ ‘ಟ್ರಿಪಲ್‌’

Published 9 ಫೆಬ್ರುವರಿ 2024, 16:24 IST
Last Updated 9 ಫೆಬ್ರುವರಿ 2024, 16:24 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಈಜುಪಟು ಎಸ್.ತಾನ್ಯಾ ದೆಹಲಿಯಲ್ಲಿ ಶುಕ್ರವಾರ ಮುಕ್ತಾಯಗೊಂಡ ಬಿಐಎಂಎಸ್‌ಟಿಇಸಿ ಅಂತರರಾಷ್ಟ್ರೀಯ ಈಜು ಚಾಂಪಿಯನ್‌ಷಿಪ್‌ನಲ್ಲಿ ಮತ್ತೊಂದು ಚಿನ್ನ ಗೆದ್ದರು. ಇದೇ ಕೂಟದಲ್ಲಿ ಅವರು ಎರಡು ಸುವರ್ಣ ಪದಕಗಳಿಗೆ ಕೊರಳೊಡ್ಡಿದ್ದರು. 

14 ವರ್ಷದ ಅವರು 400 ಮೀಟರ್ ವೈಯಕ್ತಿಕ ಮೆಡ್ಲೆ ಸ್ಪರ್ಧೆಯಲ್ಲಿ 5 ನಿಮಿಷ 12.96 ಸೆಕೆಂಡುಗಳಲ್ಲಿ ಗುರಿ ತಲುಪಿ ಪದಕ ಗಳಿಸಿದರು.

ಬುಧವಾರ 200 ಮೀಟರ್ಸ್‌ ಬ್ರೆಸ್ಟ್‌ ಸ್ಟ್ರೋಕ್ ಹಾಗೂ ವೈಯಕ್ತಿಕ ಮೆಡ್ಲೆ ಸ್ಪರ್ಧೆಯಲ್ಲೂ ಚಿನ್ನ ಗೆದ್ದ ಸಾಧನೆ ಮಾಡಿದ್ದರು. ಅಂತರರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ 3 ಚಿನ್ನ ಗೆದ್ದ ಮೈಸೂರಿನ ಮೊದಲ ಕ್ರೀಡಾಪಟು ಎಂಬ ದಾಖಲೆ ಅವರದ್ದು. ಅವರಿಗೆ ಪಿ.ಪವನ್‌ ಕುಮಾರ್ ತರಬೇತಿ ನೀಡುತ್ತಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT