ಮೈಸೂರು: ‘ದೇಶದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಒತ್ತಾಯಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನ್ ಜಿಂದಾಬಾದ್ ಎನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಬೇಕು. ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ. ನಮ್ಮ ದೇಶದ ಅನ್ನ ತಿಂದು, ನಮ್ಮ ನೀರು ಕುಡಿದು ಶತ್ರುಗಳಿಗೆ ಜೈ ಎನ್ನುವವರನ್ನು ಒಪ್ಪಲು ಸಾಧ್ಯವಿಲ್ಲ’ ಎಂದರು.
.‘ಪಾಕಿಸ್ತಾನ ಜಿಂದಾಬಾದ್’ ಕೂಗಿದ್ದು ಸಾಬೀತಾದರೆ ಗಂಭೀರ ಶಿಕ್ಷೆ: ಸಿದ್ದರಾಮಯ್ಯ.
‘ಈಗ ಯುದ್ಧದ ವಾತಾವರಣ ಸೃಷ್ಟಿಯಾಗಿದ್ದು, ಇಡೀ ದೇಶ ಪ್ರಧಾನಿ ನರೇಂದ್ರ ಮೋದಿ ಅವರ ಪರ ನಿಲ್ಲಬೇಕಾಗಿದೆ’ ಎಂದು ಹೇಳಿದರು.

‘ಜನಗಣತಿ ಜೊತೆ ಜಾತಿ ಗಣತಿಯನ್ನೂ ನಡೆಸಲು ಕೇಂದ್ರ ಸರ್ಕಾರ ನಿರ್ಣಯ ಕೈಗೊಂಡಿರುವುದು ಸ್ವಾಗತಾರ್ಹ. ಎಲ್ಲಾ ಜಾತಿಯ ಮುಖಂಡರೂ ಇದನ್ನು ಸ್ವಾಗತಿಸಿದ್ದಾರೆ. ಈಗ, ರಾಜ್ಯದಲ್ಲಿ ನಡೆಸಲಾದ ಸಮೀಕ್ಷಾ ವರದಿಯನ್ನು ಸರ್ಕಾರ ಅಧಿಕೃತವಾಗಿ ಬಹಿರಂಗಪಡಿಸಲಿ’ ಎಂದು ಆಗ್ರಹಿಸಿದರು.
.ರಾಮನಗರ | ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಬಿಜೆಪಿ–ಜೆಡಿಎಸ್ ಪ್ರತಿಭಟನೆ.
‘ಕೇಂದ್ರ ನಡೆಸುವ ಜಾತಿ ಗಣತಿಗೆ ವಿಶ್ವಾಸಾರ್ಹತೆ ಹೆಚ್ಚು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೇಕಾದವರನ್ನು ಕೂರಿಸಿಕೊಂಡು ಗಣತಿ ಮಾಡಿಸಿದ್ದರಿಂದ ಎಡವಟ್ಟುಗಳಾದವು. ಕಾಂತರಾಜ್ ಆಯೋಗದ ವರದಿಯ ಮೂಲ ಪ್ರತಿಯೇ ಇಲ್ಲದೆ ಹೇಗೆ ಸಮೀಕ್ಷೆ ನಡೆಸಿದ್ದಾರೆ?’ ಎಂದು ಕೇಳಿದರು.

‘ಕರ್ನಾಟಕದ ಜಾತಿ ಗಣತಿ ರಾಜಕೀಕರಣಗೊಂಡಿದೆ. ನಡೆಸಿದ ತಂಡವು ಒಂದು ರೀತಿ ಗಂಜಿಕೇಂದ್ರದ ತಂಡದಂತೆ ಆಗಿಹೋಯಿತು. ತಜ್ಞರಲ್ಲದೆ ಇರುವವರನ್ನೂ ಸೇರಿಸಿಕೊಂಡಿದ್ದರಿಂದ ಎಡವಟ್ಟಾದವು’ ಎಂದು ದೂರಿದರು.

ಬೆಳಗಾವಿಯಲ್ಲಿ ಎಎಸ್ಪಿ ನಾರಾಯಣ ಭರಮನಿ ಮೇಲೆ ಸಿದ್ದರಾಮಯ್ಯ ಅವರು ಕೈಎತ್ತಿದ ವಿಚಾರ ಪ್ರಸ್ತಾಪಿಸಿದ ವಿಶ್ವನಾಥ್, ‘ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲಿ ಮಾತನಾಡಿಸಿ ಏಕಾಂಗಿ ಆಗುತ್ತಿದ್ದಾರೆ. ಸಾರ್ವಜನಿಕವಾಗಿ ಅವರ ನಡವಳಿಕೆ ಸರಿ ಇಲ್ಲ. ಇದು ಯಾರೂ ಒಪ್ಪುವ ನಡೆಯಲ್ಲ’ ಎಂದರು.
.ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಖಂಡನೀಯ: ಪರಣ್ಣ ಮುನವಳ್ಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.