ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ಚುನಾವಣೆ: ವೀಕ್ಷಕರ ನೇಮಕ

Published 18 ಮೇ 2024, 14:23 IST
Last Updated 18 ಮೇ 2024, 14:23 IST
ಅಕ್ಷರ ಗಾತ್ರ

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ಚುನಾವಣಾ ಆಯೋಗ ನೇಮಕ ಮಾಡಿದೆ.

ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆ ವ್ಯಾಪ್ತಿಯ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಟಿ.ಕೆ. ಅನಿಲ್ ಕುಮಾರ್ ಅವರು ವೀಕ್ಷಕರಾಗಿದ್ದು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೆ. ರುದ್ರೇಶ್ (9964174107) ಸಹಾಯಕ ಅಧಿಕಾರಿಯಾಗಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಹರ್ಷ ಗುಪ್ತ ಚುನಾವಣಾ ವೀಕ್ಷಕರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್ (9448244340) ಸಹಾಯಕ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಿಸಿದ್ದು, ಅಬಕಾರಿ ಉಪ ಆಯುಕ್ತ ಎಸ್.ನಾಗರಾಜಪ್ಪ (9449597178) ಸಹಾಯಕ ಅಧಿಕಾರಿಯಾಗಿದ್ದಾರೆ.

ಚುನಾವಣಾ ಚುನಾವಣಾ ವೀಕ್ಷಕರನ್ನು ಸಂಪರ್ಕಿಸಲು ಮೊ.ಸಂ 7204294565ಗೆ ಕರೆ ಮಾಡಬಹುದು ಎಂದು ಈ ಕ್ಷೇತ್ರಗಳ ಚುನಾವಣಾಧಿಕಾರಿಯಾದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT