ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಆಯೋಜಿಸಿರುವ ಕಲಾ ತರಬೇತಿ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ನೆರವೇರಿಸಿದರು.

ಇಲ್ಲಿನ ಕಿರುರಂಗಮಂದಿರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ‘ಸರ್ಕಾರವು ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ರೂಪಿಸಿದೆ’ ಎಂದರು.

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಹೆಚ್ಚಿನ ರೀತಿಯ ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಎಲ್ಲ ಇಲಾಖೆಗಳ ಮೂಲಕ ವಿವಿಧ ಯೋಜನೆಗಳನ್ನು ಜಾರಿಗೊಳಿಸಿ ಪ್ರೋತ್ಸಾಹ ನೀಡುತ್ತಿದೆ’ ಎಂದು ಹೇಳಿದರು.

‘ಸಮಾಜ ಕಲ್ಯಾಣ ಇಲಾಖೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಜೊತೆಗೂಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಹಾಸ್ಟೆಲ್ಗಳ ವಿದ್ಯಾರ್ಥಿಗಳಿಗೆ ವಿವಿಧ ಕಲಾ ಪ್ರಕಾರಗಳನ್ನು ಪರಿಚಯವನ್ನು ಮಾಡುವ ಉದ್ದೇಶದಿಂದ ತರಬೇತಿ ಕೊಡುತ್ತಿದೆ. ಸುಗಮ ಸಂಗೀತ, ಜಾನಪದ ಸಂಗೀತ, ಶಾಸ್ತ್ರೀಯ ಸಂಗೀತ, ನೃತ್ಯ ಮೊದಲಾದ ಕಲೆಗಳನ್ನು ಕಲಿಸುವ ಕಾರ್ಯಕ್ರಮ ಇದಾಗಿದೆ. ವಿದ್ಯಾರ್ಥಿಗಳು ಈ ವಿಶಿಷ್ಟ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಮಾತನಾಡಿ, ‘ಇಲಾಖೆಯ ವಿವಿಧ ಕಾರ್ಯಕ್ರಮಗಳ ಜೊತೆ ಪ.ಜಾತಿ ಮತ್ತು ಪ.ಪಂ. ಉಪ ಯೋಜನೆಯಡಿ ಕಲಾ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳನ್ನು ಮೊಬೈಲ್ ಬಳಕೆಯಿಂದ ಹೊರತಂದು ಜಾನಪದ ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಸೆಳೆಯುವುದು ಮುಖ್ಯ ಉದ್ದೇಶವಾಗಿದೆ’ ಎಂದು ತಿಳಿಸಿದರು.

ಇಲಾಖೆಯ ಮೈಸೂರು ವಿಭಾಗ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮಾನ್ವಯಾಧಿಕಾರಿ ಕೆ.ಎಂ.ಮಲ್ಲೇಶ್, ನಿಲಯ ಪಾಲಕರದ ಸಿ.ಆರ್.ಗುರುಪ್ರಸಾದ್, ಸರಸ್ವತಿ, ತರಬೇತುದಾರದ ದೇವಾನಂದ ವರಪ್ರಸಾದ್, ನಾರಾಯಣಸ್ವಾಮಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.