ಮೈಸೂರು ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯು ಆಯೋಜಿಸಿರುವ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 2 ಸಾವಿರ ಸ್ಪರ್ಧಿಗಳು ಭಾಗಿ ಆಗಲಿದ್ದಾರೆ. 5 ವಿಭಾಗಗಳಲ್ಲಿ 136 ಸ್ಪರ್ಧೆಗಳು ನಡೆಯಲಿವೆ. ಇದೇ ವೇಳೆ, ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಹಾಗೂ ರಾಷ್ಟ್ರೀಯ ಯುವ ಕ್ರೀಡಾಕೂಟಕ್ಕೆ (23 ವರ್ಷದ ಒಳಗಿನವರು) ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆಯು ನಡೆಯಲಿದೆ.