ಮೈಸೂರು: ಜಿಲ್ಲೆಯ 67 ಆರೋಗ್ಯ ಕೇಂದ್ರಗಳು 2022–23ನೇ ಸಾಲಿನ ‘ಕಾಯಕಲ್ಪ ಪ್ರಶಸ್ತಿ’ಗೆ ಭಾಜನರಾಗಿದ್ದು, ಬುಧವಾರ ಪ್ರಶಂಸಾಪತ್ರವನ್ನು ವಿತರಿಸಲಾಯಿತು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಕೇಂದ್ರಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು.

ನಂತರ ಮಾತನಾಡಿ, ‘ಜಿಲ್ಲೆಯಾದ್ಯಂತ 2024–25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆರೋಗ್ಯ ಸೇವೆ ಒದಗಿಸುವಲ್ಲಿ ಸಾರ್ವಜನಿಕರಿಂದ ದೂರುಗಳು ಬಾರದಂತೆ ನೋಡಿಕೊಳ್ಳಬೇಕು. ಮುಖ್ಯಮಂತ್ರಿಯ ತವರು ಜಿಲ್ಲೆಯಾಗಿರುವುದರಿಂದ ಹೆಚ್ಚಿನ ಮುತುವರ್ಜಿಯಿಂದ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

‘ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಮಾರ್ಗಸೂಚಿ ಅನುಸಾರ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಶೇ 100ರಷ್ಟು ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ ನಿರ್ದೇಶನ ನೀಡಿದರು.

ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ ಹಾಗೂ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.