ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಎ ಒಕ್ಕೂಟ ಅಧಿಕಾರಕ್ಕೆ ಬೇಡ: ಬಡಗಲಪುರ ನಾಗೇಂದ್ರ

Published 23 ಮಾರ್ಚ್ 2024, 5:00 IST
Last Updated 23 ಮಾರ್ಚ್ 2024, 5:00 IST
ಅಕ್ಷರ ಗಾತ್ರ

ಮೈಸೂರು: ‘ದೇಶದಲ್ಲಿ ಎನ್‌ಡಿಎ ಒಕ್ಕೂಟ ಅಧಿಕಾರಕ್ಕೆ ಬರುವುದನ್ನು ತಡೆಯಬೇಕಿದೆ’ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ– ರೈತ ಸಮುದಾಯವನ್ನು ಉಳಿಸಿ ಎಂಬ ಘೋಷಣೆಯಡಿ ಈಚೆಗೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರೈತ-ಕಾರ್ಮಿಕ ಮಹಾಪಂಚಾಯತ್‌ನಲ್ಲಿ ದೇಶದ ರೈತರು ನಿರ್ಣಯ ಕೈಗೊಂಡಿದ್ದಾರೆ’ ಎಂದು ತಿಳಿಸಿದರು.

‘ಕಳೆದ ಬಾರಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರೈತ ಸಂಘಟನೆಗಳು, ದಲಿತ, ಕಾರ್ಮಿಕ, ಮಹಿಳಾ, ಯುವಜನ, ವಿದ್ಯಾರ್ಥಿ ಮತ್ತು ಪ್ರಗತಿಪರ ಸಂಘಟನೆಗಳ ಸತತ ಪ್ರಯತ್ನದಿಂದ ರಾಜ್ಯದಲ್ಲಿ ಬಿಜೆಪಿಯನ್ನು ವಿಧಾನಸೌಧದಿಂದ ತೊಲಗಿಸಲಾಯಿತು. ಈ ಲೋಕಸಭಾ ಚುನಾವಣೆಯಲ್ಲೂ ಇದೇ ಪ್ರಯತ್ನ ಮತ್ತಷ್ಟು ವಿಸ್ತಾರವಾಗಿ ಮಾಡಲಾಗುತ್ತಿದೆ’ ಎಂದರು.

ಬಾಗಲಕೋಟೆ, ಉತ್ತರ ಕನ್ನಡ ಮತ್ತು ಕೆಲವು ಕ್ಷೇತ್ರಗಳಲ್ಲಿ ರೈತ ಸಂಘದ ಮುಖಂಡರು ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಸದ್ಯದಲ್ಲಿಯೇ ಸರ್ವೋದಯ ಕರ್ನಾಟಕ ಪಕ್ಷದೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜ್, ಸರ್ವೋದಯ ಕರ್ನಾಟಕ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್.ಗೌಡ, ನಾಗೇನಹಳ್ಳಿ ವಿಜಯೇಂದ್ರ, ಪಿ. ಮಾರಂಕಯ್ಯ, ಪ್ರಕಾಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT