ಮಂಗಳವಾರ, 20 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.22ರಂದು ಬೆಂಗಳೂರು ಚಲೋ

ಪ್ರತಿಭಟನಾ ರ‍್ಯಾಲಿ; 25 ಸಾವಿರ ಪೌರಕಾರ್ಮಿಕರು ಭಾಗಿ
Published 20 ಡಿಸೆಂಬರ್ 2023, 15:36 IST
Last Updated 20 ಡಿಸೆಂಬರ್ 2023, 15:36 IST
ಅಕ್ಷರ ಗಾತ್ರ

ಮೈಸೂರು: ‘ಪಾಲಿಕೆ, ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಡಿ.22ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘11,800 ಸಾವಿರ ಪೌರಕಾರ್ಮಿಕರಿಗಷ್ಟೇ ನೇರಪಾವತಿ ವ್ಯವಸ್ಥೆ ಜಾರಿಯಲ್ಲಿದೆ. ಇನ್ನೂ 26,200 ಪೌರಕಾರ್ಮಿಕರಿಗೆ ಸೌಲಭ್ಯ ಸಿಕ್ಕಿಲ್ಲ’ ಎಂದರು.

‘ಡಿ.22ರಂದು ಬೆಳಿಗ್ಗೆ 11ಕ್ಕೆ ಬಿಬಿಎಂಪಿ ಕಚೇರಿಯಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆಯುವ ಪ್ರತಿಭಟನಾ ರ‍್ಯಾಲಿಯಲ್ಲಿ 25 ಸಾವಿರ ಪೌರಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

‘ಗುತ್ತಿಗೆ ಪದ್ಧತಿ ರದ್ದಾಗಿ ನೇರ ಪಾವತಿ ವ್ಯವಸ್ಥೆ ಜಾರಿಗೊಂಡರೂ ಉದ್ಯೋಗ, ಆರ್ಥಿಕ, ಸಾಮಾಜಿಕ ಹಾಗೂ ಆರೋಗ್ಯ ಭದ್ರತೆ ಇಲ್ಲ. ಒಳಚರಂಡಿ ಕಾರ್ಮಿಕರು, ವಾಹನ ಚಾಲಕರು ನೇರ ಪಾವತಿ ವ್ಯವಸ್ಥೆಗೆ ಒಳಪಟ್ಟಿಲ್ಲ. ಅವರನ್ನೂ ಕಾಯಂ ಮಾಡಲು ಹಾಗೂ ಈ ಬಗ್ಗೆ ಸರ್ಕಾರದ ಗಮನ ಸೆಳೆಯಲು ರ‍್ಯಾಲಿ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಮುಖಂಡರಾದ ಆರ್‌.ಶಿವಣ್ಣ, ಎಸ್‌‍.ಎಂ.ಪಳನಿಸ್ವಾಮಿ, ನಾಗರಾಜು, ಆರ್‌.ದಾಸ್‌, ಪಳನಿ, ಜಯರಾಮು, ಕೆ.ನಾಗರತ್ನ, ಮಂಜು ಪಾಲ್ಗೊಂಡಿದ್ದರು.

Cut-off box - ‘ಪೌರಕಾರ್ಮಿಕರ ಗ್ಯಾರಂಟಿ ಈಡೇರಿಸಲಿ’ ‘ಬಿಬಿಎಂಪಿಯಲ್ಲಿ 18 ಸಾವಿರ ಪೌರಕಾರ್ಮಿಕರು ಇದ್ದಾರೆ. ಉಳಿದೆಡೆ 20 ಸಾವಿರ ಕಾರ್ಮಿಕರಿದ್ದಾರೆ. ಎಲ್ಲರಿಗೂ ಸೇವಾ ಭದ್ರತೆ ಸಿಗಲು ಹೋರಾಟ ನಡೆಸಿದ್ದಾರೆ. 25 ಸಾವಿರ ಪೌರಕಾರ್ಮಿಕರನ್ನು ಕಾಯಂ ಮಾಡುವುದಾಗಿ ಕಾಂಗ್ರೆಸ್‌‍ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಅದರಂತೆ ಎಲ್ಲ ಪೌರಕಾರ್ಮಿಕರನ್ನು ಕಾಯಂ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT