ಬೆಟ್ಟದಪುರ: ಗ್ರಾಮದ ಭಾರತ್ ಗ್ಯಾಸ್ ಏಜೆನ್ಸಿ ಬಳಿ ಶುಕ್ರವಾರ ಗೃಹ ಬಳಕೆ ಗ್ಯಾಸ್ ಸಿಲಿಂಡರ್ಗಾಗಿ ನೂರಕ್ಕೂ ಹೆಚ್ಚು ಗ್ರಾಹಕರು ಕಾದು ಕುಳಿತು ಹತಾಶೆಗೊಂಡರು.

ಬೆಟ್ಟದಪುರ ಭಾರತ್ ಗ್ಯಾಸ್ ಏಜೆನ್ಸಿ ಮುಂಭಾಗ ಶುಕ್ರವಾರ ಬೆಳಿಗ್ಗೆಯಿಂದಲ್ಲೇ ಗ್ರಾಹಕರು ಕಾದು ಕುಳಿತರು. ಗ್ಯಾಸ್ ಸಿಲಿಂಡರ್ ನೀಡುತ್ತಿಲ್ಲ. ಬುಕ್ಕಿಂಗ್ ಮಾಡಿ ಎರಡು ತಿಂಗಳಾದರು ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ. ಅಲ್ಲದೇ ಒಟಿಪಿ ಕೊಟ್ಟಿದ್ದರು ಸಿಲಿಂಡರ್ ಕೊಡುತ್ತಿಲ್ಲ. ಇಂದು, ನಾಳೆ ಎಂದು ಹೇಳುತ್ತಾರೆಯೇ ಹೊರತು, ಗ್ಯಾಸ್ ಸಿಲಿಂಡರ್ ನೀಡುವಲ್ಲಿ ವಿಫಲವಾಗಿದ್ದಾರೆ ಎಂದು ಏಜೆನ್ಸಿಗಳ ವಿರುದ್ಧ ಗ್ರಾಹಕರು ವಾಗ್ವಾದಕ್ಕೆ ಇಳಿದರು. ಇದೆ ವೇಳೆ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಸಮಸ್ಯೆ ಬಗ್ಗೆ ಗಮನಕ್ಕೆ ಬಂದಿದ್ದು, ಶನಿವಾರ ಎಲ್ಲರಿಗೂ ಗ್ಯಾಸ್ ಸಿಲಿಂಡರ್ ನೀಡುವ ಬಗ್ಗೆ ಕ್ರಮವಹಿಸಲಾಗುವುದು ಎಂದು ತಾಲ್ಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶಿರಸ್ತೇದಾರ ಸಣ್ಣಸ್ವಾಮಿ ತಿಳಿಸಿದ್ದಾರೆ.

ಒಂದು ವಾರದ ಹಿಂದೆ ಇದೇ ರೀತಿ ಸಮಸ್ಯೆ ಉಂಟಾಗಿ ಜನರು ಗ್ಯಾಸ್ ಏಜೆನ್ಸಿಯ ಮುಂದೆ ಸಿಲಿಂಡರ್ಗಾಗಿ ಕಾದು ಕುಳಿತ ಪ್ರಸಂಗ ನಡೆದಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-38-1714471363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.