ಬೆಟ್ಟದಪುರ: ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ರಾಜ್ ದಿವಸ್ ಅಂಗವಾಗಿ ಶುಕ್ರವಾರ ವಿಶೇಷ ಗ್ರಾಮ ಸಭೆ ನಡೆಯಿತು.

ಗ್ರಾಮದ ಅಭಿವೃದ್ಧಿ, ಸಾರ್ವಜನಿಕ ಸೌಲಭ್ಯಗಳು, ಕುಡಿಯುವ ನೀರು, ಸ್ವಚ್ಛತೆ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ ಕುರಿತು ಚರ್ಚೆ ನಡೆಯಿತು.

ಪಿಡಿಒ ಎಚ್.ಡಿ. ಮಂಜುನಾಥ್ ಮಾತನಾಡಿ, ‘ಪಂಚಾಯತ್ ರಾಜ್ ವ್ಯವಸ್ಥೆ ಗ್ರಾಮ ಮಟ್ಟದ ಆಡಳಿತವನ್ನು ಬಲಪಡಿಸುವ ಮಹತ್ವದ ವ್ಯವಸ್ಥೆಯಾಗಿದೆ. ಜನರು ಗ್ರಾಮ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಅಭಿವೃದ್ಧಿ ಕಾರ್ಯಗಳು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳ್ಳುತ್ತವೆ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲು ಎಲ್ಲರೂ ಸಹಕರಿಸಬೇಕು’ ಎಂದು ಕೋರಿದರು.

ಕಾರ್ಯದರ್ಶಿ ಎ.ಪಿ ಪಾಂಡು, ದ್ವಿತೀಯ ದರ್ಜೆ ಲೆಕ್ಕಸಹಾಯಕ ಶ್ರೀನಿಧಿ ಕೆ.ಎಲ್., ಡಾಟಾ ಎಂಟ್ರಿ ಆಪರೇಟರ್ ದೀಪು, ಕರ ವಸೂಲಿಗಾರ ಅಣ್ಣೇಗೌಡ, ಗ್ರಂಥಾಲಯ ಮೇಲ್ವಿಚಾರಕ ಮೈಲಾರಿ, ಗ್ರಾಮಸ್ಥರಾದ ಮಾಲಿನಿ, ಪವಿತ್ರಾ, ಶೀಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-38-694182485

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.