ಬೆಟ್ಟದಪುರ: ಸಮೀಪದ ಬೆಟ್ಟದತುಂಗಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಚ್.ಪಿ.ವಿ ಲಸಿಕಾ ಹಾಗೂ ಅರಿವು ಕಾರ್ಯಕ್ರಮ ನಡೆಯಿತು.

ಕೇಂದ್ರದ ವೈದ್ಯಾಧಿಕಾರಿ ಡಾ.ಹರ್ಷಿತಾ ಮಾತನಾಡಿ, ‘ಹೆಣ್ಣು ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸುವುದರೊಂದಿಗೆ ಸುರಕ್ಷಿತ ಲಸಿಕೆ, ಸುಂದರ ಭವಿಷ್ಯ, ಆರೋಗ್ಯ ನಮ್ಮ ಆದ್ಯತೆ ಎಂಬ ಘೋಷವಾಕ್ಯದೊಂದಿಗೆ 14 ವರ್ಷದ ಎಲ್ಲಾ ಹೆಣ್ಣು ಮಕ್ಕಳಿಗೆ ಎಚ್ಪಿವಿ ಲಸಿಕೆಯನ್ನು ಹಾಕಿಸುವುದರ ಮೂಲಕ ಗರ್ಭಕಂಠ ಕ್ಯಾನ್ಸರ್ ಮುಕ್ತ ಸಮಾಜಕ್ಕೆ ಸಹಕಾರ ನೀಡಬೇಕಿದೆ’ ಎಂದು ಹೇಳಿದರು.

‘ಈ ಲಸಿಕೆ ನಮ್ಮ ಹೆಣ್ಣುಮಕ್ಕಳ ಆರೋಗ್ಯ ಹಾಗೂ ನಾಡಿನ ಸುಭದ್ರತೆ ಭವಿಷ್ಯದ ಬುನಾದಿಯಾಗಿದೆ. ಎಚ್ಪಿವಿ ಲಸಿಕೆಯು ಹ್ಯೂಮನ್ ಪ್ಯಾಪಿಲೋಮ ವೈರಸ್ನಿಂದ ಉಂಟಾಗುವ ಕೆಲವು ಗಂಭೀರ ಕಾಯಿಲೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಈ ಕಾಯಿಲೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಗುದ ಮತ್ತು ಗಂಟಲು ಕ್ಯಾನ್ಸರ್ ಎಂಬ ವಿವಿಧ ಭಾಗದ ಕ್ಯಾನ್ಸರ್ಗಳಿದ್ದು ಎಚ್.ಪಿ.ವಿ ಲಸಿಕೆಯಿಂದ ತಡೆಗಟ್ಟಬಹುದಾಗಿದೆ’ ಎಂದರು.

ಮುಖಂಡ ಯಶೋಧರ, ಆರೋಗ್ಯ ನಿರೀಕ್ಷಣಾಧಿಕಾರಿ ರವಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಮತಾ, ಸಮುದಾಯ ಆರೋಗ್ಯಾಧಿಕಾರಿ ಅನಿಲ್, ಶಿಕ್ಷಕಿ ಸಲ್ಮಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260321-38-1068792754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.