ಬೆಟ್ಟದಪುರ: ‘ಕಣಗಾಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕು’ ಎಂದು ಸದಸ್ಯರು ಹಾಗೂ ಸ್ಥಳೀಯರು ಆಗ್ರಹಿಸಿದರು.

ಸಮೀಪದ ಕಣಗಾಲು ಗ್ರಾಮದಲ್ಲಿ ಈಚೆಗೆ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮನವಿ ಮಾಡಿದ ಸದಸ್ಯರು, ‘ಸಂಘದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಯದರ್ಶಿಯು ಅವ್ಯವಹಾರ ಮಾಡಿದ್ದು, ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು, ಆದರೆ ಅಧಿಕಾರಿಗಳು, ಪಕ್ಷದವರು ಶಾಮೀಲಾಗಿ ದೊಡ್ಡ ಪಿತೂರಿ ಮಾಡಿಕೊಂಡು ಕಾರ್ಯದರ್ಶಿಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ. ಸಚಿವರ ಮತ್ತು ನಿಮ್ಮ ಹೆಸರುಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ನ್ಯಾಯ ಕೇಳಲು ಹೋಗುವರ ಮೇಲೆ ಪೊಲೀಸರ ಮೂಲಕ ಹೆದರಿಸುತ್ತಾರೆ’ ಎಂದು ಆರೋಪಿಸಿದರು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ನೀವು ಸಮಸ್ಯೆಗೆ ಮುಕ್ತಿ ನೀಡಿ, ನ್ಯಾಯ ದೊರಕಿಸಿಕೊಡಬೇಕು ಎಂದು ಡೇರಿ ಸದಸ್ಯರು, ಸ್ಥಳೀಯರು ನಿತಿನ್ ವೆಂಕಟೇಶ್ ಅವರ ಗಮನಕ್ಕೆ ತಂದರು.

ಪ್ರತಿಕ್ರಿಯಿಸಿದ ನಿತಿನ್ ವೆಂಕಟೇಶ್, ‘ಸಮಸ್ಯೆಯ ಬಗ್ಗೆ ತಂದೆ ಕೆ.ವೆಂಕಟೇಶ್ ಅವರ ಬಳಿ ಚರ್ಚಿಸಿ, ಮಾತನಾಡುತ್ತೇನೆ. ಪೊಲೀಸರ ವಿಚಾರದಲ್ಲಿ ಕ್ರಮವಹಿಸುತ್ತೇನೆ’ ಎಂದು ಭರವಸೆ ನೀಡಿದರು.

ಪಕ್ಷ ಸೇರ್ಪಡೆ:ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಲವರು ಜೆಡಿಎಸ್ನಿಂದ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ತಾಲ್ಲೂಕು ಆಶ್ರಯ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಹೇಳಿದರು.

‘ಪಕ್ಷದ ಸಿದ್ಧಾಂತ ಮೆಚ್ಚಿ ಬರುತ್ತಿದ್ದು, ಸಂಘಟನೆ ಶಕ್ತಿ ಮತ್ತಷ್ಟು ಹೆಚ್ಚಾಗುತ್ತಿದೆ. ಹಿರಿಯ ಕಾರ್ಯಕರ್ತರು ಇದೀಗ ಸೇರ್ಪಡೆಗೊಂಡ ಹೊಸ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಬಲವರ್ಧನೆ ಮುಂದಾಬೇಕು’ ಎಂದರು.

ಶಿವಮ್ಮ, ಪ್ರತಿಮಾ, ಜಯಮ್ಮ, ಭಾಗ್ಯಮ್ಮ, ಮಧು, ಪ್ರಕಾಶ್, ಅರುಣ, ಉಮೇಶ್, ಸ್ವಾಮಿಗೌಡ, ರೇವಣ್ಣ, ಪ್ರಭಾಕರ, ಶ್ರೀನಿವಾಸ, ಧನಪಾಲ್, ಸ್ವಾಮಿಗೌಡ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-38-875338086

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.