ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭೆ ಸದ್ಬಳಕೆ ಮಾಡಿಕೊಳ್ಳಿ: ವಿನೋದ್ ಗೊಬ್ಬರಗಾಲ

Published 15 ಫೆಬ್ರುವರಿ 2024, 14:14 IST
Last Updated 15 ಫೆಬ್ರುವರಿ 2024, 14:14 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ‘ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶವನ್ನು ಉತ್ತಮವಾಗಿ ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಮಾದರಿ ವ್ಯಕ್ತಿಯಾಗಿ ಹೊರಹೊಮ್ಮಬೇಕು’ ಹಾಸ್ಯ ಕಲಾವಿದ ವಿನೋದ್ ಗೊಬ್ಬರಗಾಲ ಹೇಳಿದರು.

ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಬಿಜಿಎಸ್ ವಿದ್ಯಾಸಂಸ್ಥೆಯಿಂದ ಈಚೆಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರತಿಯೊಬ್ಬರಲ್ಲೂ ತಮ್ಮದೆ ಆದ ವಿಶೇಷ ಪ್ರತಿಭೆ ಇರುತ್ತದೆ. ಅದನ್ನು ಸೂಕ್ತ ಸಮಯದಲ್ಲಿ ಸೂಕ್ತ ವೇದಿಕೆಯಲ್ಲಿ ಪ್ರದರ್ಶಿಸಿದಾಗ ಯಶಸ್ಸು ಸಾಧಿಸಬಹುದು’ ಎಂದರು.

ಕಲಾವಿದೆ ಕಲಾರತಿ ಮಹದೇವ್ ಮಾತನಾಡಿ, ‘ನಾವೆಲ್ಲರೂ ಪರಭಾಷಾ ವ್ಯಾಮೋಹ ಬಿಟ್ಟು ನಾವು ಹುಟ್ಟಿ ಬೆಳೆದ ಕರುನಾಡಿನ ಇತಿಹಾಸ ಬಗ್ಗೆ ಇತರರಿಗೆ ತಿಳಿಸಬೇಕು’ ಎಂದರು.

ಉಪ ಪ್ರಾಂಶುಪಾಲ ಮಹದೇವ್ ಮಾತನಾಡಿ, ‘ಪೋಷಕರು ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ವಿದ್ಯಾಭ್ಯಾಸ ಮಾಡಿ ಉನ್ನತ ಶ್ರೇಣಿ ಪಡೆದು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಜೀವನ ನಡೆಸಬೇಕು’ ಎಂದು ತಿಳಿಸಿದರು.

ಸಂಸ್ಥೆಯ ಆಡಳಿತಾಧಿಕಾರಿ ಎಚ್.ಎನ್ ಸುಧಾಕರ್ ಮಾತನಾಡಿ, ‘ಸಂಸ್ಥೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಸತತ ಪರಿಶ್ರಮ ಹಾಗೂ ವಿದ್ಯಾರ್ಥಿಗಳ ಕಲಿಕೆಯಿಂದ ಉತ್ತಮ ಫಲಿತಾಂಶದ ಕಡೆ ಗಮನ ಹರಿಸಲಾಗುತ್ತಿದೆ’ ಎಂದರು.

ಕಲಾವಿದರಾದ ವಿನೋದ್ ಗೊಬ್ಬರಗಾಲ ಹಾಗೂ ಕಲಾರತಿ ಮಹದೇವ್ ಗೀತೆಗಳನ್ನು ಹಾಡಿ ಹಾಸ್ಯದ ಮೂಲಕ ರಂಜಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದರು.

ಮುಖ್ಯ ಶಿಕ್ಷಕರಾದ ಶ್ರೀನಿವಾಸ್, ಪ್ರಭಾಕರ್ ಸಿಂಗ್, ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬೆಕ್ಕರೆ ಸತೀಶ್ ಆರಾಧ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನವೀನ್ ಕುಮಾರ್, ಪ್ರಾಂಶುಪಾಲರಾದ ಗೋವಿಂದೇಗೌಡ, ಕೆ.ಆರ್.ಪ್ರವೀಣ್, ಮುಖ್ಯ ಶಿಕ್ಷಕಿ ದಿವ್ಯಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT