ಮೈಸೂರು: ಭಾರತ್ ಜೋಡೊ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಇಲ್ಲಿನ ಸುತ್ತೂರು ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು. ಅವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು.
ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ, ಮುಖಂಡ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆಗಿದ್ದರು.