ನಂಜನಗೂಡು: ‘ಬೀದರ್ ಜಿಲ್ಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಶಿಕ್ಷೆ ಆಗುವಂತೆ ಕ್ರಮ ವಹಿಸಬೇಕು’ ಎಂದು ದಸಂಸ ತಾಲ್ಲೂಕು ಸಂಚಾಲಕ ಘಟ್ಟವಾಡಿ ಮಹೇಶ್ ಒತ್ತಾಯಿಸಿದರು.

ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆ ಬಾಲಕಿಯನ್ನು ಅಪರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಇದು ಖಂಡನೀಯ’ ಎಂದರು.

‘ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಅರೆಬೆಳಚಿ ಗ್ರಾಮದಲ್ಲಿ ಪರಿಶಿಷ್ಟ ಜನಾಂಗದ ಕಾಲೊನಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಮೇಲ್ವರ್ಗದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಆ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯವರು ಧರಣಿ ನಡೆಸುತ್ತಿದ್ದರೂ ಸಂಬಂಧಪಟ್ಟ ಯಾವ ಅಧಿಕಾರಿಯೂ ಅವರನ್ನು ಭೇಟಿ ಆಗದಿರುವುದು ಸರಿಯಲ್ಲ. ಬೇಜವಾಬ್ದಾರಿ ತೋರಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಕ್ರಮ ಕೈಗೊಂಡು ಅಲ್ಲಿನ ಪಿಡಿಒ ಮತ್ತು ತಾಪಂ ಇಒ ಅಮಾನತುಗೊಳಿಸಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ನಾರಾಯಣ, ಆನಂದ್, ಹೂವಯ್ಯ, ಲೋಕೇಶ್, ಆದರ್ಶ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-38-522341634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.