ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ: ಆರೋಗ್ಯ ಸಚಿವ ಸುಧಾಕರ್‌

Last Updated 28 ಅಕ್ಟೋಬರ್ 2022, 10:18 IST
ಅಕ್ಷರ ಗಾತ್ರ

ಮೈಸೂರು: ‘ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರು ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆ– ಕ್ಲಿನಿಕ್‌ಗಳಲ್ಲಿ ಕಾರ್ಯನಿರತರಾಗಿದ್ದರೆ, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಬಯೊಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳಿಸಲಾಗುವುದು’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

‘ನಿಯಮಗಳನ್ನು ಉಲ್ಲಂಘಿಸುತ್ತಿರುವ ವೈದ್ಯರಿಗೆ ಜಿಯೊ ಟ್ಯಾಗ್ ಅಳವಡಿಸುವ ಹಾಗೂ ಕಚೇರಿ ಅವಧಿ ಮುಗಿದ ನಂತರ ಕಾಲೇಜಿನಲ್ಲಿಯೇ ಖಾಸಗಿಯಾಗಿ ಚಿಕಿತ್ಸೆ ನೀಡುವ ಅವಕಾಶವನ್ನು ವೈದ್ಯರಿಗೆ ನೀಡುವ ಚಿಂತನೆಯು ಸರ್ಕಾರದ ಮುಂದಿದೆ’ ಎಂದು ಶುಕ್ರವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ವೈದ್ಯರ ಕೊರತೆ ನೀಗಿಸಲಾಗಿದ್ದು, ಶೇ 10ರಷ್ಟು ತಜ್ಞರ ನೇಮಕಾತಿಗೆ ಸರ್ಕಾರವು ಚಿಂತನೆ ನಡೆಸಿದೆ.‍ಲ್ಯಾಬ್‌ ಟೆಕ್ನಿಷಿಯನ್ಸ್, ಫಾರ್ಮಸಿಸ್ಟ್‌ ಹಾಗೂ ‘ಡಿ’ ಗ್ರೂಪ್‌ ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗುವುದು. ವೈದ್ಯಕೀಯ ಕಾಲೇಜುಗಳಲ್ಲಿತುರ್ತು ಆರೈಕೆ, ಡಯಾಲಿಸಿಸ್‌ ತಾಂತ್ರಿಕ ಕೋರ್ಸ್‌ ಆರಂಭಿಸಲಾಗುವುದು’ ಎಂದರು.

‘2030ರೊಳಗೆ ‘ಕ್ಷಯ ಮುಕ್ತ ಭಾರತ’ ನಿರ್ಮಾಣ ಗುರಿ ಪ್ರಧಾನಿ ಮೋದಿ ಅವರದ್ದಾಗಿದ್ದು, ರಾಜ್ಯದಲ್ಲಿ 2025ರೊಳಗೆ ಕ್ಷಯ ನಿರ್ಮೂಲನೆ ಮಾಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.

438 ‘ನಮ್ಮ ಕ್ಲಿನಿಕ್‌’ ಆರಂಭ:‘ನ.8ರೊಳಗೆರಾಜ್ಯದಪಾಲಿಕೆ, ನಗರಸಭೆ ವ್ಯಾಪ್ತಿಯ ಕೊಳಗೇರಿಯಲ್ಲಿ 438 ‘ನಮ್ಮ ಕ್ಲಿನಿಕ್‌’ ಆರಂಭಿಸಲು ಕ್ರಮವಹಿಸಲಾಗಿದೆ. ಮುಂದಿನ ವಾರದಲ್ಲಿಯೇ ಚಾಲನೆ ನೀಡಲಾಗುತ್ತಿದೆ. 128 ‘ಮಹಿಳಾ ಸ್ವಾಸ್ಥ್ಯ ಕ್ಲಿನಿಕ್‌’ಗಳನ್ನು ಆರಂಭಿಲಾಗುತ್ತಿದೆ’ ಎಂದು ಸಚಿವ ಸುಧಾಕರ್‌ ತಿಳಿಸಿದರು.

‘4.80 ಕೋಟಿಆಯುಷ್ಮಾನ್‌ ಭಾರತ್‌ ಕಾರ್ಡ್‌ಗಳನ್ನು ಇದೇ ವರ್ಷದ ಡಿಸೆಂಬರ್ ಒಳಗೆ ವಿತರಿಸಲು ಗುರಿ ಹಾಕಿಕೊಳ್ಳಲಾಗಿದೆ. ಅನೀಮಿಯಾ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಶಾಲೆಗಳಲ್ಲಿ ಚಿಕಿತ್ಸಾ ಅಭಿಯಾನ ಆರಂಭಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT