ಬಳಕೆಯಾಗದ ಅನುದಾನ: ಆರೋಪ
ನಗರ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಅನಂತ ಮಾತನಾಡಿ, ಹಿಂದಿನ ಶಾಸಕರ ಅವಧಿಯಲ್ಲಿ ನಗರೋತ್ಥಾನ ಯೋಜನೆಯಡಿ ತಂದ ₹13 ಕೋಟಿ ಅನುದಾನ ಬಳಕೆಯಾಗಿಲ್ಲ, ಇದರಿಂದಾಗಿ 2 ನೇ ಅವದಿಯ ₹42 ಕೋಟಿ ಅನುದಾನ ಬಿಡುಗಡೆಯಾಗಿಲ್ಲ. ನಗರಸಭೆಯಲ್ಲಿ ಬಿ ಖಾತೆ, ಟ್ರೇಡ್ ಲೈಸ್ ಪಡೆದುಲೊಳ್ಳುವ ವಿಚಾರವಾಗಿ ಅಧಿಕಾರಿಗಳು ಮಧ್ಯವರ್ತಿಗಳನ್ನು ಇಟ್ಟುಕೊಂಡು ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ನಗರಸಭೆಯಿಂದ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ, ನಗರಸಭೆಯ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ನಡೆಸಲಾಗುತ್ತಿದೆ. ಬಿಜೆಪಿ ಸದಸ್ಯರ ವಾರ್ಡ್‌ಗಳ ಅಭಿವೃದ್ಧಿಗೆ ಅನುದಾನದ ಕೊರತೆ ಎದುರಾಗಿದೆ ಎಂದು ಹೇಳಿದರು.