ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಮುಖಂಡ ಕಾಪು ಸಿದ್ಧಲಿಂಗಸ್ವಾಮಿ ನಿಧನ

Published 6 ಜೂನ್ 2024, 8:10 IST
Last Updated 6 ಜೂನ್ 2024, 8:10 IST
ಅಕ್ಷರ ಗಾತ್ರ

ಮೈಸೂರು: ಬಿಜೆಪಿ ಮುಖಂಡ ಕಾಪು ಸಿದ್ಧಲಿಂಗಸ್ಬಾಮಿ (56) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು.

ಬಿ.ಎಸ್. ಯಡಿಯೂರಪ್ಪ ಆಪ್ತರಾಗಿದ್ದ ಅವರು 2013ರಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಿದ್ದರಾಮಯ್ಯ ಎದುರು ಪರಾಭವಗೊಂಡಿದ್ದರು. 2021ರಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ‌ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಅವಿವಾಹಿತರಾಗಿದ್ದ ಅವರಿಗೆ ತಂದೆ, ಸಹೋದರ ಹಾಗೂ ಸಹೋದರಿ ಇದ್ದಾರೆ. ಗುರುವಾರ ಸಂಜೆ ಸ್ವಗ್ರಾಮದ ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT