ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬಿಸಿಗೆ ಕಾಂಗ್ರೆಸ್ ‘ಚೊಂಬು’: ರಘು ಟೀಕೆ

Published 20 ಏಪ್ರಿಲ್ 2024, 15:20 IST
Last Updated 20 ಏಪ್ರಿಲ್ 2024, 15:20 IST
ಅಕ್ಷರ ಗಾತ್ರ

ಮೈಸೂರು: ‘ಹಿಂದುಳಿದ, ಅಸಂಘಟಿತ ಸಮುದಾಯಗಳ ಹಿತಾಸಕ್ತಿಯನ್ನು ಕಾಂಗ್ರೆಸ್ ಕಡೆಗಣಿಸಿದೆ. ಸಿದ್ದರಾಮಯ್ಯ ನಿಜವಾಗಿ ಚೊಂಬು ಕೊಟ್ಟಿರುವುದು ಈ ಸಮುದಾಯಗಳಿಗೆ’ ಎಂದು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಅಧ್ಯಕ್ಷ ಆರ್‌. ರಘು ಕೌಟಿಲ್ಯ ಟೀಕಿಸಿದರು.

‘ಬಿಜೆಪಿ ಸರ್ಕಾರವು ಹಿಂದುಳಿದ ವರ್ಗಗಳ ನಿಗಮಗಳಿಗೆ ಹಿಂದಿನ ಅವಧಿಯಲ್ಲಿ ₹500 ಕೋಟಿ ಅನುದಾನ ಕೊಟ್ಟಿತ್ತು. ಸಿದ್ದರಾಮಯ್ಯ ಸರ್ಕಾರ ಮೊದಲ ಬಜೆಟ್‌ನಲ್ಲಿ ಅದನ್ನು ₹170 ಕೋಟಿಗೆ ಇಳಿಸಿತ್ತು. ಈ ವರ್ಷ ಈ ನಿಗಮಗಳಿಗೆ ಸರ್ಕಾರ ಬಿಡಿಗಾಸು ಅನುದಾನ ಬಿಡುಗಡೆ ಮಾಡಿಲ್ಲ.‌ ಈ ವರ್ಗದ ಜನರ ಹಣವನ್ನೂ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 75 ಸಾವಿರದಿಂದ 1 ಲಕ್ಷ‌ ಹಿಂದುಳಿದ ವರ್ಗಗಳ ಮತದಾರರಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಮತ ಚಲಾಯಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಸಮಾವೇಶ: ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶವು ಏ.21ರಂದು ಬೆಳಿಗ್ಗೆ 11ಕ್ಕೆ ವಸ್ತು ಪ್ರದರ್ಶನ ಮೈದಾನದ ಆವರಣದಲ್ಲಿ ನಡೆಯಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪಾಲ್ಗೊಳ್ಳಲಿದ್ದಾರೆ’ ಎಂದರು.

ಪಕ್ಷದ ಮುಖಂಡರಾದ ಬಾಬು ಪತ್ತಾರ, ಚನ್ನಕೇಶವ, ಚಲುವರಾಜ್, ರಂಗಾಚಾರ್, ರಶ್ಮಿ, ಜಗದೀಶ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT