ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 31ರಂದು ‘ವೀರಸೌದಾಮಿನಿ’ ಚಿತ್ರಸಂಪುಟ ಬಿಡುಗಡೆ

Published 24 ಮಾರ್ಚ್ 2024, 15:02 IST
Last Updated 24 ಮಾರ್ಚ್ 2024, 15:02 IST
ಅಕ್ಷರ ಗಾತ್ರ

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಸಂಶೋಧಕ ಸಂತೋಷ ಹಾನಗಲ್ಲ ಅವರ ‘ವೀರಸೌದಾಮಿನಿ ಕಿತ್ತೂರು ರಾಣಿ ಚನ್ನಮ್ಮ ಚಿತ್ರಸಂಪುಟ’ದ ಬಿಡುಗಡೆ ಕಾರ್ಯಕ್ರಮವನ್ನು ಇಲ್ಲಿನ ವಿಜಯನಗರ 1ನೇ ಹಂತದ ಕನ್ನಡ ಸಾಹಿತ್ಯ ಭವನದಲ್ಲಿ ಮಾರ್ಚ್‌ 31ರಂದು ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ.

ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ರಾಜಗುರು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕವಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಬಿಡುಗಡೆ ಮಾಡುವರು. ಸಾಹಿತಿ ಸಿ.ಪಿ. ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸುವರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್‌ ಪ್ರಾಸ್ತಾವಿಕ ಮಾತನಾಡುವರು. ಸಾಹಿತಿ ಎಂ.ಎಸ್. ಶಶಿಕಲಾಗೌಡ ಕೃತಿ ಪರಿಚಯಿಸುವರು. ಕಸಾಪ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಡಾ.ವೈ.ಡಿ. ರಾಜಣ್ಣ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಚಿತ್ರಸಂಪುಟದ ಲೇಖಕ ಸಂತೋಷ ಹಾನಗಲ್ಲ ಉಪಸ್ಥಿತರಿರುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT