ಸೋಮವಾರ, ಮಾರ್ಚ್ 27, 2023
30 °C

ಮೈಸೂರು: ಬೌದ್ಧ ಮಹಾ ಸಮ್ಮೇಳನ ಫೆ.26ರಂದು

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

ಮೈಸೂರು: ‘ಭಾರತೀಯ ಬೌದ್ಧ ಮಹಾಸಭಾದಿಂದ ಫೆ.26ರಂದು ಇಲ್ಲಿನ ಲಲಿತಮಹಲ್ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೌದ್ಧ ಮಹಾಸಮ್ಮೇಳನ ಆಯೋಜಿಸಲಾಗಿದೆ’ ಎಂದು ನಳಂದಾ ಬೌದ್ಧ ವಿಶ್ವವಿದ್ಯಾಲಯದ ಕಾರ್ಯದರ್ಶಿ ಭೋದಿದತ್ತ ಭಂತೇಜಿ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 9.30ಕ್ಕೆ ಪುರಭವನದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವರ ಮೊಮ್ಮಗ ಡಾ.ಭೀಮ್‌ರಾವ್‌ ಯಶವಂತರಾವ್ ಅಂಬೇಡ್ಕರ್ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಸಮತಾ ಸೈನಿಕ ದಳದ ಸದಸ್ಯರಿಂದ ಧಮ್ಮ ನಡಿಗೆಯು ಕಾರ್ಯಕ್ರಮದ ವೇದಿಕೆಯವರೆಗೆ ಸಾಗಲಿದೆ’ ಎಂದರು.

‘ವೇದಿಕೆಯಲ್ಲಿ ಬಿಕ್ಕುಗಳು ಹಾಗೂ ಡಾ.ಭೀಮ್‌ರಾವ್ ಮಾತನಾಡಲಿದ್ದಾರೆ. ಈ ವೇಳೆ ಬುದ್ಧ ಧಮ್ಮ ಕೃತಿಗಳ ಬಿಡುಗಡೆ ನಡೆಯಲಿದೆ. 10ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ’ ಎಂದು ಮಾಹಿತಿ ನೀಡಿದರು.

ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಗನ್ನಾಥ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್, ಎಸ್.ಶಿವಾಜಿ, ಪುರುಷೋತ್ತಮ, ಕೆ.ಆರ್.ಗೋಪಾಲಕೃಷ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು