ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಜನರಿಗೆ ನಿರಂತರ ದ್ರೋಹ: ಯಡಿಯೂರಪ್ಪ

ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಟೀಕೆ
Published 18 ಏಪ್ರಿಲ್ 2024, 15:44 IST
Last Updated 18 ಏಪ್ರಿಲ್ 2024, 15:44 IST
ಅಕ್ಷರ ಗಾತ್ರ

ಕೆ.ಆರ್.ನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ನಿರಂತರವಾಗಿ ದ್ರೋಹ ಎಸಗುತ್ತಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಟೀಕೆ ಮಾಡಿದರು.

ಇಲ್ಲಿನ ರೇಡಿಯೋ ಮೈದಾನದಲ್ಲಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಜೆಡಿಎಸ್- ಬಿಜೆಪಿ ವತಿಯಿಂದ ಗುರುವಾರ ನಡೆದ  ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್ ಸರ್ಕಾರ ಜನರ ಪಾಲಿಗೆ ಸತ್ತಂತಾಗಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಗ್ಯಾರಂಟಿಗಳಿಂದ ದಿವಾಳಿಯಾಗಿದೆ’ ಎಂದರು.

‘ಇಲ್ಲಿ ಕುಮಾರಸ್ವಾಮಿ ಅಲ್ಲ, ಬಿ.ಎಸ್.ಯಡಿಯೂರಪ್ಪ ನಿಂತಿದ್ದಾರೆ ಎಂದು ತಿಳಿದು ಕುಮಾರಸ್ವಾಮಿ ಅವರಿಗೆ ಮತದಾನ ಮಾಡಬೇಕು’ ಎಂದರು.

‘ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳು ರಾಜ್ಯದಲ್ಲಿ 28ಕ್ಕೆ 28 ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಲಿದ್ದಾರೆ. ನರೇಂದ್ರ ಮೋದಿ ಪ್ರಧಾನಿ ಆಗುವುದನ್ನು ಯಾರೂ ತಪ್ಪಿಸಲಾಗದು. ನಮ್ಮ ಪ್ರಧಾನಿ ನರೇಂದ್ರ ಮೋದಿ ಎಂದು ಹೇಳುತ್ತೇವೆ. ಆದರೆ ಕಾಂಗ್ರೆಸ್ ಯಾರ ಹೆಸರು ಹೇಳುತ್ತದೆ’ ಎಂದು ಲೇವಡಿ ಮಾಡಿದರು.

‘ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ‘ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸ್ವಾರ್ಥಕ್ಕಾಗಿ ಮಾಡಿಕೊಂಡಿಲ್ಲ. ಬರಗಾಲದಿಂದ ರಾಜ್ಯದಲ್ಲಿ ಸುಮಾರು ₹28ಸಾವಿರ ಕೋಟಿ ಮೊತ್ತದ ರೈತರ ಬೆಳೆ ನಷ್ಟವಾಗಿದೆ. ಖಜಾನೆ ಲೂಟಿ ಹೊಡೆದಿರುವ ಕಾಂಗ್ರೆಸ್ ಸರ್ಕಾರ, ಬರ ಪರಿಹಾರ ಕೊಡಲಿಲ್ಲ ಎಂದು ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ’ ಎಂದು ದೂರಿದರು.

ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ತಂದಿರುವ ಕಾಂಗ್ರೆಸ್ ಸರ್ಕಾರ ಒಂದು ಕಡೆ ಕೊಟ್ಟು ನಾಲ್ಕು ಕಡೆ ಕಿತ್ತುಕೊಳ್ಳುತ್ತಿದೆ. ಮಹಿಳೆಯರಿಗೆ ₹ 2ಸಾವಿರ ಕೊಟ್ಟು ಮನೆಯ ಯಜಮಾನನಿಂದ ₹5ರಿಂದ 6ಸಾವಿರ ಕಿತ್ತುಕೊಳ್ಳುತ್ತಿದೆ’ ಎಂದು ಹೇಳಿದರು.

ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್, ಸಿ.ಎಸ್.ಪುಟ್ಟರಾಜು, ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸಾ.ರಾ.ಮಹೇಶ್ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ರಾಜ್ಯ ಘಟಕದ ಕಾರ್ಯದರ್ಶಿ ಚಂದ್ರಶೇಖರ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಮುಖಂಡರಾದ ಮಿರ್ಲೆ ಶ್ರೀನಿವಾಸಗೌಡ, ಹೊಸಹಳ್ಳಿ ವೆಂಕಟೇಶ್, ಎ.ಎಸ್.ಚನ್ನಬಸಪ್ಪ, ಮೂಳೆತಜ್ಷ ಮೆಹಬೂಬ್ ಖಾನ್, ಎಂ.ಟಿ.ಕುಮಾರ್, ವೈ.ಆರ್.ಪ್ರಕಾಶ್, ಒಕ್ಕಲಿಗರ ಸಂಘದ ಅಧ್ಯಕ್ಷ ಮಿರ್ಲೆ ಅಣ್ಣೇಗೌಡ, ವಕ್ತಾರ ಕೆ.ಎಲ್.ರಮೇಶ್, ಜೆಡಿಎಸ್ ಅಧ್ಯಕ್ಷ ಹಂಪಾಪುರ ಕುಮಾರ್, ಪುರಸಭೆ ಸದಸ್ಯರಾದ ಉಮೇಶ್, ಕೆ.ಎಲ್.ಜಗದೀಶ್, ಕೆ.ಪಿ.ಪ್ರಭುಶಂಕರ್, ತೋಂಟದಾರ್ಯ, ಮುಖಂಡರಾದ ಜಿ.ಪಿ.ಮಂಜು, ಲಾಲನಹಳ್ಳಿ ಮಹೇಶ್, ಹನಸೋಗೆ ನಾಗರಾಜ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT