ಮೈಸೂರು: ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಚಾಮುಂಡಿ ಬೆಟ್ಟ ಪಾದದಲ್ಲಿರುವ ಸುತ್ತೂರು ಮಠದ ಮೈಸೂರು ಶಾಖೆಗೆ ಭೇಟಿ ನೀಡಿ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಬಳಿಕ ಮದ್ಯಮದೊಂದಿಗೆ ಮಾತನಾಡಿ, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ದಲಿತರು, ಶೋಷಿತರ ಪರವಾಗಿ ಕೆಲಸ ಮಾಡಲಿ. ಈವರೆಗೆ ಆ ಕಾರ್ಯ ನಡೆದಿಲ್ಲ. ರಾಜ್ಯದಲ್ಲಿ ಹೊಸ ಬದಲಾವಣೆ ತರಲು ರಾಜ್ಯಾದ್ಯಂತ ಪ್ರವಾಸ ಆರಂಭಿಸಿದ್ದೇನೆ' ಎಂದು ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಠಕ್ಕೆ ಭೇಟಿ ನೀಡಿದರು.

ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ, ಮಾಜಿ ವಿಧಾನಪರಿಷತ್ ಸದಸ್ಯ ತೋಂಟದಾರ್ಯ, ಎನ್.ಮಹೇಶ್, ಪ್ರತಾಪ ಸಿಂಹ, ಮಲ್ಲಿಕಾರ್ಜುನಪ್ಪ, ಶಂಕರ್ ರಾವ್ ಭಾಗವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.