ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಿ’

Published 1 ಸೆಪ್ಟೆಂಬರ್ 2024, 2:51 IST
Last Updated 1 ಸೆಪ್ಟೆಂಬರ್ 2024, 2:51 IST
ಅಕ್ಷರ ಗಾತ್ರ

ಮೈಸೂರು: ‘ಭೂಗಳ್ಳರು ಹಾಗೂ ಗಣಿಗಳ್ಳರ ವಿರುದ್ಧ ತನಿಖೆಗೆ ಅವಕಾಶ ನೀಡದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಖಾಸಗಿ ವ್ಯಕ್ತಿ ನೀಡಿದ ದೂರಿನ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ತಾರತಮ್ಯವೆಸಗಿದ್ದಾರೆ. ಕೂಡಲೇ ಅವರನ್ನು ರಾಷ್ಟ್ರಪತಿಯವರು ಹಿಂದಕ್ಕೆ ಕರೆಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಅಶ್ವತ್ಥನಾರಾಯಣ ಅಂತ್ಯಜ ಆಗ್ರಹಿಸಿದ್ದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಂವಿಧಾನಿಕ ಹುದ್ದೆಗೆ ಅಗೌರವ ಮಾಡಿದ್ದಾರೆ. ಪ್ರಜಾಪ್ರಭುತ್ವಕ್ಕೂ ಅವಮಾನ ಮಾಡಿದ್ದಾರೆ. ಕೂಡಲೇ ಅವರು ಈ ಅನುಮತಿಯನ್ನು ರದ್ದುಗೊಳಿಸಬೇಕು’ ಎಂದರು.

‘ಸಿದ್ದರಾಮಯ್ಯ ಅವರ ವಿರುದ್ಧ ವಿರೋಧ ಪಕ್ಷಗಳು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿವೆ’ ಎಂದು ಆರೋಪಿಸಿದರು.

ರಾಜ್ಯ ಅಹಿಂದ ಸಂಘಟನೆ ಅಧ್ಯಕ್ಷ ಎ.ಆರ್.ಸ್ವಾಮಿ, ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ, ರಾಜ್ಯ ನಾಯಕ ಸಮುದಾಯದ ಮುಖಂಡ ಅ.ನಾ.ಪ್ರಸಾದ್, ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಯೋಜಕಿ ಎಸ್.ಪೂರ್ಣಿಮಾ, ಅಹಿಂದ ಮುಖಂಡರಾದ ಉಮಾವತಿ ರಂಗಸ್ವಾಮಿ, ಸಮಿತಿ ಸದಸ್ಯ ಎಚ್.ರಾಜಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT