ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಕತ್ತಿದ್ದರೆ ಜಾತಿ ಗಣತಿ ವರದಿ ಮಂಡಿಸಲಿ: ಸಿಎಂಗೆ ಈಶ್ವರಪ್ಪ ಸವಾಲು

Published 2 ಮಾರ್ಚ್ 2024, 13:44 IST
Last Updated 2 ಮಾರ್ಚ್ 2024, 13:44 IST
ಅಕ್ಷರ ಗಾತ್ರ

ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ, ಜಾತಿ ಗಣತಿ ವರದಿಯನ್ನು ಸಚಿವ ಸಂಪುಟದಲ್ಲಿ ಇಡಲಿ. ವಿಧಾನಸೌಧದಲ್ಲಿ ಚರ್ಚೆಗೆ ಮಂಡಿಸಲಿ. ಆಗ ಕಾಂಗ್ರೆಸ್‌ನವರೇ ಪರಸ್ಪರ ಹೊಡೆದಾಡಿಕೊಳ್ಳದಿದ್ದರೆ ನೋಡಿ’ ಎಂದು ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಟೀಕಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಜಾತಿ– ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ‌. ಹಿಂದುಳಿದ ವರ್ಗಗಳ ಚಾಂಪಿಯನ್ ಎನಿಸಿಕೊಳ್ಳಲು ಹಿಂದೂ ಸಮಾಜವನ್ನು ಜಾತಿ ಹೆಸರಿನಲ್ಲಿ ಒಡೆಯುತ್ತಿದ್ದಾರೆ’ ಎಂದು ದೂರಿದರು. ‘ಅವರು ಮುಸ್ಲಿಮರ ಪರವಿರಲಿ. ಬಿಜೆಪಿ ಹಿಂದೂಗಳ ಪರ ಇರುತ್ತದೆ’ ಎಂದರು.

‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಾಯಿಗೆ ಬೀಗ ಹಾಕಬೇಕು. ಅವರು ಬಾಯಿಗೆ ಬಂದಂತೆ ಹೇಳಿಕೆ‌ ಕೊಡುತ್ತಿದ್ದಾರೆ. ಅವರು ಭಯೋತ್ಪಾದಕರ ಪರ ಎಂಬುದು ನಮಗೆ ಗೊತ್ತಾಗಿದೆ. ಅವರ ಮೇಲೆ ಯಾವ ನಂಬಿಕೆಯೂ ಉಳಿದಿಲ್ಲ’ ಎಂದು ವಾಗ್ದಾಳಿ ನಡೆಸಿದರು.

‘ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್ ಘೋಷಣೆ ಪ್ರಕರಣದ ಎಫ್ಎಸ್ಎಲ್ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕು. ತಡ ಮಾಡಿದಷ್ಟೂ ವರದಿ ತಿರುಚುತ್ತಿದ್ದಾರೆ ಎಂಬ ಅನುಮಾನ ಹೆಚ್ಚಾಗುತ್ತದೆ. ಅಂತಹ ಘಟನೆ ನಡೆದೇ ಇಲ್ಲ ಎಂದು ಕೆಲ ಸಚಿವರು ಈಗಾಗಲೇ ಹೇಳಿಕೆ ನೀಡಿದ್ದಾರೆ. ಹೀಗಾಗಿ ಆ ವರದಿಗೇನು ಬೆಲೆ?’ ಎಂದು ಕೇಳಿದರು.

‘ನಮ್ಮ ಪ್ರಕಾರ ಈಗಾಗಲೇ ಎಫ್ಎಸ್ಎಲ್ ವರದಿ ಬಂದಿದೆ. ಸರ್ಕಾರ ಅದನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ’ ಎಂದು ಆರೋಪಿಸಿದರು.

‘ಜನರು ಆ ವರದಿ ಬಿಡುಗಡೆಗೆ ಕಾಯುತ್ತಿದ್ದಾರೆ. ನೀವು ಮುಸ್ಲಿಮರ ಪರವಾಗಿಯೇ ಇರಿ. ಆದರೆ, ಭಯೋತ್ಪಾದಕ ಚಟುವಟಿಕೆ ನಡೆಸುವವರು ಹಾಗೂ ದೇಶದ್ರೋಹಿಗಳನ್ನು ರಕ್ಷಿಸಬೇಡಿ’ ಎಂದು ಮುಖ್ಯಮಂತ್ರಿಯನ್ನು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT