ಮೈಸೂರು: ‘ಸರ್ಕಾರಿ ಉದ್ಯೋಗ ಸಿಗುವುದು ಕಷ್ಟಕರವಾದ ಈ ಸಂದರ್ಭದಲ್ಲಿ ದೊರೆತಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಿಸ್ತು, ನಿಷ್ಠೆ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ಬದುಕಿನಲ್ಲಿ ಪ್ರಗತಿ ಸಾಧಿಸಬಹುದು’ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲರಾಜು ಹೇಳಿದರು.

ತಾಲ್ಲೂಕಿನ ಕಡಕೊಳದ ಕೆಇಬಿಇಎ ತರಬೇತಿ ಕೇಂದ್ರದಲ್ಲಿ 2026ನೇ ಸಾಲಿನ ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳಿಗೆ ಶುಕ್ರವಾರ ಆಯೋಜಿಸಿದ್ದ ಪರಿಚಯಾತ್ಮಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಕಿರಿಯ ಪವರ್ ಮ್ಯಾನ್ಗಳಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ತರಬೇತಿ ನೀಡಲಾಗುತ್ತಿದೆ. ರೋಸ್ಟರ್ ಆಧಾರದ ಮೇಲೆ ಉದ್ಯೋಗ ಲಭಿಸಿದೆ. ತಾಂತ್ರಿಕವಾಗಿ ಸುಸಜ್ಜಿತ ವ್ಯವಸ್ಥೆಯನ್ನು ನಿಗಮದಲ್ಲಿ ಮಾಡಲಾಗಿದೆ’ ಎಂದರು.

‘ಪವರ್ಮ್ಯಾನ್ಗಳು ಸಂಸ್ಥೆ–ಗ್ರಾಹಕರ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದಾರೆ. ಅವರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಅದನ್ನು ಸಮರ್ಥವಾಗಿ ನಿರ್ವಹಿಸಬೇಕು. ತರಬೇತಿ ಹಾಗೂ ಸೇವಾ ಅವಧಿಯಲ್ಲಿ ಶಿಸ್ತು ಪಾಲಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಕೆಲಸದ ವೇಳೆ ಸುರಕ್ಷತೆ ಅತ್ಯಂತ ಮುಖ್ಯವಾಗಿದ್ದು, ವಿದ್ಯುತ್ ಅವಘಡಗಳನ್ನು ತಪ್ಪಿಸಲು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಗ್ರಾಹಕರಿಗೆ ನಿರಂತರ ಮತ್ತು ಅಡಚಣೆ ರಹಿತ ವಿದ್ಯುತ್ ಪೂರೈಸುವುದು ನಮ್ಮ ಗುರಿ’ ಎಂದರು.

ನಿವೃತ್ತ ಎಂಜಿನಿಯರ್ಗಳಾದ ಯೋಗೇಗೌಡ, ಮೋಹನ್ ಶಂಕರ್, ಚನ್ನವೀರಯ್ಯ, ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ವೈ. ಹೇಮಾ, ಎಇಇಗಳಾದ ರಾಮಚಂದ್ರ, ಅನೀಶ್ ಪಾತಕ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.