ಮೈಸೂರು: ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಪ್ರಧಾನ ಕಚೇರಿಯಲ್ಲಿ ನಿರ್ಮಿಸಿರುವ 4ನೇ ಮಹಡಿಯ ಕಚೇರಿಗಳ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು.

ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲರಾಜು ಉದ್ಘಾಟಿಸಿದರು.

ಬಳಿಕ ಮಾತನಾಡಿದ ರಮೇಶ್, ‘ನೂತನ ಕಚೇರಿ ಉದ್ಘಾಟನೆಯಿಂದಾಗಿ ನಿಗಮದ ಆಡಳಿತಾತ್ಮಕ ಕಾರ್ಯಗಳಿಗೆ ಇನ್ನಷ್ಟು ವೇಗ ದೊರೆಯಲಿದೆ. ನಿಗಮದ ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಉತ್ತಮ ವಾತಾವರಣ ಕಲ್ಪಿಸಲು ನೆರವಾಗಲಿದೆ’ ಎಂದರು.

ಇದೇ ವೇಳೆ, ಸೆಸ್ಕ್ ವ್ಯಾಪ್ತಿಯ ವಿವಿಧ ಉಪ ವಿಭಾಗಗಳಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರಿಗೆ ನೇಮಕಾತಿ ಪತ್ರ ವಿತರಿಸಲಾಯಿತು. ಅಶ್ವಿನಿ, ಮಹಾಂತೇಶ್, ಸುಮಂತ್ರಾಜ್ ಅರಸ್, ಡಿ. ಮನೋಜ್, ಕೆ. ಕವಿತಾ, ಯುವಶ್ರೀ ಹಾಗೂ ವಿಜಯಕುಮಾರಿ ಸಹಾಯಕರಾಗಿ, ದೀಕ್ಷಿತ್ ಅವರಿಗೆ ಕಿರಿಯ ಸಹಾಯಕರಾಗಿ ಹಾಗೂ ಶ್ರೀಧರ್ ಅವರಿಗೆ ಸಹಾಯಕ ಪವರ್ ಮ್ಯಾನ್ ಹುದ್ದೆಯ ನೇಮಕಾತಿ ಪತ್ರವನ್ನು ವಿತರಿಸಲಾಯಿತು.

ನಿಗಮದ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಪ್ರಧಾನ ವ್ಯವಸ್ಥಾಪಕಿರಾದ ಲಿಂಗರಾಜಮ್ಮ, ಬಿ.ಆರ್.ರೂಪಾ, ಆರ್.ರಾಮಸ್ವಾಮಿ, ಮುಖ್ಯ ಎಂಜಿನಿಯರ್ ಎಲ್. ಲೋಕೇಶ್, ಎಸ್ಇ ಸುನೀಲ್ ಕುಮಾರ್, ಸೋಮಶೇಖರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.