ಹಂಪಾಪುರ: ‘ಬಸವಣ್ಣ ಮತ್ತು ಶ್ರೀರಾಮಚಂದ್ರ ಮಾದರಿ ವ್ಯಕ್ತಿಗಳು, ಇವರ ತತ್ವ ಮತ್ತು ಆದರ್ಶಗಳನ್ನು ನಾವು ಅಳವಡಿಸಿಕೊಂಡು ನಡೆದರೆ ಸಮ ಸಮಾಜ ನಿರ್ಮಾಣ ಸಾಧ್ಯ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಎಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕೆರೆಯೂರು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮಮಂದಿರ ಮತ್ತು ಬಸವೇಶ್ವರ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇವಾಲಯಗಳನ್ನು ನಿರ್ಮಿಸಿ, ದೇವರ ಬಗೆಗೆ ಯುವ ಪೀಳಿಗೆಗೆ ತಿಳಿಸಬೇಕು. ಈ ನಿಟ್ಟಿನಲ್ಲಿ ಚಿಕ್ಕೆರೆಯೂರು ಗ್ರಾಮಸ್ಥರ ಕಾರ್ಯ ಮಾದರಿ ಎಂದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ‘ಹಿಂದೂ ಸಮಾಜದಲ್ಲಿ ರಾಮ–ಲಕ್ಷ್ಮಣರಿಗೆ ಗೌರವ ಸ್ಥಾನವನ್ನು ನೀಡುತ್ತಾ ಬಂದಿದ್ದೇವೆ. ದಂಪತಿಗೆ ರಾಮ–ಸೀತೆಯಂತೆ ಮಾದರಿಯಾಗಿ ಬದುಕಿರಿ ಎಂದು ಹಿರಿಯರು ಆಶೀರ್ವಾದ ಮಾಡುತ್ತಾರೆ. ಇದು ರಾಮನಿಗೆ ಇರುವ ಮಹತ್ವ ತಿಳಿಸುತ್ತದೆ’ ಎಂದು ಹೇಳಿದರು.

ಸ್ವಾಮೀಜಿಗಳನ್ನು ಗ್ರಾಮಸ್ಥರು ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಸ್ವಾಗತಿಸಿದರು.

ಬಿಡಗಲಿನ ಮಹದೇವ ಸ್ವಾಮೀಜಿ, ಮಾದಾಪುರದ ಚಂದ್ರಮೌಳೇಶ್ವರ ಸ್ವಾಮೀಜಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-38-471243110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.