ಬೆಟ್ಟದಪುರ: ಸಮೀಪದ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಶನಿವಾರ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಬಾಲಕ ಧನಂಜಯ (13) ಮೃತಪಟ್ಟಿದ್ದಾನೆ.

ಮಧ್ಯಾಹ್ನ 3.30ರ ಸುಮಾರಿಗೆ ಮನೆಯ ಹಿಂದೆ ಮಕ್ಕಳ ಜೊತೆ ಕ್ರಿಕೆಟ್ ಆಡುತ್ತಿದ್ದಾಗ ತಂತಿ ಬೇಲಿಯ ಬಳಿ ಬಿದ್ದ ಕ್ರಿಕೆಟ್ ಚೆಂಡು ತರಲು ಹೋದಾಗ ವಿದ್ಯುತ್ ತಗುಲಿದೆ. ತಕ್ಷಣ ಅಲ್ಲಿದ್ದ ಕೆಲಸಗಾರರು ಬಾಲಕನ ಕುಟುಂಬಸ್ಥರಿಗೆ ಮಾಹಿತಿ ನೀಡಿ, ಪಿರಿಯಾಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

ಬಾಲಕನ ಚಿಕ್ಕಪ್ಪ ನಟರಾಜ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-51-626451189

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.