ಸರಗೂರು: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ವಾಲ್ಮೀಕಿ ಭವನದ ಚಾವಣಿ ನಿರ್ಮಾಣಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಭರಿಸಲು ಕ್ರಮವಹಿಸಲಾಗುವುದು ಎಂದು ಶಾಸಕ ಅನಿಲ್ ಚಿಕ್ಕಮಾದು ಭರವಸೆ ನೀಡಿದರು.

ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ವಾಲ್ಮೀಕಿ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿ, ‘ಸದ್ಯ ವಾಲ್ಮೀಕಿ ಭವನ ಅಪೂರ್ಣಗೊಂಡಿದ್ದು, ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಇದಲ್ಲದೆ ಭವನದ ಮೇಲ್ಭಾಗದಲ್ಲಿ ದೊಡ್ಡದಾದ ಹಾಲ್ ನಿರ್ಮಾಣ ಮಾಡಲಾಗುವುದು’ ಎಂದು ಅವರು ತಿಳಿಸಿದರು.

‘ವಾಲ್ಮೀಕಿ ಭವನವು 16 ವರ್ಷಗಳ ಹಿಂದೆ ಮಂಜೂರಾಗಿದ್ದು, ಇದಕ್ಕೆ ₹50 ಲಕ್ಷದಿಂದ ₹60 ಲಕ್ಷ ಬಿಡುಗಡೆಯಾಗಿದೆ. ಆದರೆ ಇನ್ನೂ ಸಂಪೂರ್ಣವಾಗಿಲ್ಲ. ಸರ್ಕಾರದ ಭವನ ಇದಾಗಿದ್ದು, ತನಿಖೆ ನಡೆಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗೆ ಪತ್ರ ಬರೆದು ಮಾಹಿತಿ ಕಲೆ ಹಾಕಲಾಗುವುದು. ತಾಲ್ಲೂಕಿನಲ್ಲಿ ಸಮುದಾಯ ವಾಸಿಸುವ ಕಡೆಗಳಲ್ಲಿ ಶೇ 90ರಷ್ಟು ವಾಲ್ಮೀಕಿ ಸಮುದಾಯ ಭವನ ಮಂಜೂರಾಗಿವೆ. ಕೋಟೆ ಪಟ್ಟಣದಲ್ಲಿ ಈ ವರ್ಷದಲ್ಲೇ ಭವನ ಪೂರ್ಣಗೊಳಿಸಲಾಗುವುದು’ ಎಂದು ಅವರು ತಿಳಿಸಿದರು.

‘ಮುಳ್ಳೂರು ಗ್ರಾಮದಲ್ಲಿ ಜನಿಸಿ ಜಿಲ್ಲೆಯಲ್ಲಿಯೇ ಹೆಸರು ಮಾಡಿರುವ ಮಾಜಿ ಶಾಸಕ ದಿ.ಚಿಕ್ಕಮಾದು ಅವರ ಒಡನಾಡಿ ದೊಡ್ಡನಾಯಕ ಅವರು ವಾಲ್ಮೀಕಿ ಭವನ ನಿರ್ಮಾಣಕ್ಕೆ ನಿವೇಶನ ನೀಡಿದ್ದಾರೆ. ಒಂದೂವರೆ ವರ್ಷದಲ್ಲಿ ಸುಸಜ್ಜಿತ ವಾಲ್ಮೀಕಿ ಭವನ ಕಟ್ಟಡ ನಿರ್ಮಿಸಿ, ಮುಂದಿನ ದಿನಗಳಲ್ಲಿ ಮತ್ತೇ ವಾಲ್ಮೀಕಿ ಭವನವನ್ನು ಎಲ್ಲ ಸಮುದಾಯ ಜನರ ಸಹಭಾಗಿತ್ವದಲ್ಲಿ ಉದ್ಘಾಟಿಸಲಾಗುವುದು’ ಎಂದರು.

ಸ್ಥಳ ದಾನಿಗಳಾದ ಮುಖಂಡ ಎಂ.ಸಿ. ದೊಡ್ಡನಾಯಕ ಮಾತನಾಡಿ, ‘ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಜಾಗ ನೀಡಲಾಗಿದ್ದು, ಶಾಸಕ ಅನಿಲ್ ಚಿಕ್ಕಮಾದು ಅವರ ನೇತೃತ್ವದಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಗ್ರಾಮಸ್ಥರು ಶಾಸಕರ ಸಹಕಾರ ಪಡೆಯಬೇಕು’ ಎಂದರು.

ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ಕಾಂಗ್ರೆಸ್ ಮುಖಂಡರಾದ ಶಂಭುಲಿಂಗನಾಯಕ, ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷ ಪುರದಕಟ್ಟೆ ಬಸವರಾಜು, ದೊಡ್ಡವೀರನಾಯಕ, ವಾಲ್ಮೀಕಿ ಸಿದ್ದರಾಜು, ಶ್ಯಾಮಣ್ಣ, ಬಡಗಲಪುರ ಗಂಗಾಧರ್, ಸಂತೋಷ್ ಹಾಗೂ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-38-1589665638

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.