ಚಾಮುಂಡೇಶ್ವರಿಗೆ ಜಯವಾಗಲಿ... ಎಂಬ ಘೋಷಣೆ, ವಾದ್ಯಗೋಷ್ಠಿಗಳ ನಾದ, ಸಿಡಿಮದ್ದಿನ ಸದ್ದು, ಕಲಾ ತಂಡಗಳ ಪ್ರದರ್ಶನ ರಥೋತ್ಸವದ ರಂಗನ್ನು ಹೆಚ್ಚಿಸಿತು.
ಪ್ರಜಾವಾಣಿ ಚಿತ್ರ
ADVERTISEMENT
ಸಾವಿರಾರು ಭಕ್ತರು ಒಕ್ಕೊರಲಿನಿಂದ ನಾಡದೇವತೆಗೆ ಜೈಕಾರ ಹೇಳಿ, ಬಾಳೆಹಣ್ಣು, ಜವನ ಎಸೆದು ಪ್ರಾರ್ಥಿಸಿದರು.
ಪ್ರಜಾವಾಣಿ ಚಿತ್ರ
ರಾಜವಂಶಸ್ಥ ಹಾಗೂ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪೂಜೆ ಸಲ್ಲಿಸಿದ ಬಳಿಕ ಉತ್ಸವ ಮೂರ್ತಿಯನ್ನು ರಥದೊಳಗೆ ಪ್ರತಿಷ್ಠಾಪಿಸಲಾಯಿತು. ಯದುವೀರ ಅವರು ರಥದ ಹಗ್ಗ ಎಳೆದು ರಥೋತ್ಸವಕ್ಕೆ ಚಾಲನೆ ನೀಡಿದರು.
ಪ್ರಜಾವಾಣಿ ಚಿತ್ರ
ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್, ಯದುವೀರ ಅವರ ಪತ್ನಿ ತ್ರಿಷಿಕಾ ಕುಮಾರಿ, ಶಾಸಕ ಜಿ.ಟಿ.ದೇವೇಗೌಡ ಭಾಗವಹಿಸಿದ್ದರು.