ಮೈಸೂರು: ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ರಥೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಜಯಘೋಷಗಳ ನಡುವೆ ಸೋಮವಾರ ವಿಜೃಂಭಣೆಯಿಂದ ನಡೆಯಿತು.

ಚಾಮುಂಡೇಶ್ವರಿಗೆ ಜಯವಾಗಲಿ... ಎಂಬ ಘೋಷಣೆ, ವಾದ್ಯಗೋಷ್ಠಿಗಳ ನಾದ, ಸಿಡಿಮದ್ದಿನ ಸದ್ದು, ಕಲಾ ತಂಡಗಳ ಪ್ರದರ್ಶನ ರಥೋತ್ಸವದ ರಂಗನ್ನು ಹೆಚ್ಚಿಸಿತು. ಸಾವಿರಾರು ಭಕ್ತರು ಒಕ್ಕೊರಲಿನಿಂದ ನಾಡದೇವತೆಗೆ ಜೈಕಾರ ಹೇಳಿ, ಬಾಳೆಹಣ್ಣು, ಜವನ ಎಸೆದು ಪ್ರಾರ್ಥಿಸಿದರು.

ರಾಜವಂಶಸ್ಥ ಹಾಗೂ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪೂಜೆ ಸಲ್ಲಿಸಿದ ಬಳಿಕ ಉತ್ಸವ ಮೂರ್ತಿಯನ್ನು ರಥದೊಳಗೆ ಪ್ರತಿಷ್ಠಾಪಿಸಲಾಯಿತು. ಯದುವೀರ ಅವರು ರಥದ ಹಗ್ಗ ಎಳೆದು ರಥೋತ್ಸವಕ್ಕೆ ಚಾಲನೆ ನೀಡಿದರು.

ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್, ಯದುವೀರ ಅವರ ಪತ್ನಿ ತ್ರಿಷಿಕಾ ಕುಮಾರಿ, ಶಾಸಕ ಜಿ.ಟಿ.ದೇವೇಗೌಡ ಭಾಗವಹಿಸಿದ್ದರು.
.ಮೈಸೂರು ದಸರಾ | ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ: ಕಾಡಿಗೆ ವಾಪಸ್ ಆದ ಆನೆಗಳು.ಮೈಸೂರು: ಮುಗಿದ ದಸರಾ; ನಿಲ್ಲದ ಸಂಭ್ರಮ.ಲೈವ್ನಲ್ಲೂ ಹೊಳೆದ ಮೈಸೂರು ದಸರಾ: 1.33 ಕೋಟಿ ದಾಖಲೆಯ ವೀಕ್ಷಣೆ .PHOTOS | ಮೈಸೂರು ದಸರಾ ಎಷ್ಟೊಂದು ಸುಂದರ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.