ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಗಿರಿ ಪ್ರಕರಣ | ಪೊಲೀಸ್ ಅಧಿಕಾರಿಗಳ ಅಮಾನತು: ಮುಖ್ಯಮಂತ್ರಿ ಸಿದ್ದರಾಮಯ್ಯ

Published 25 ಮೇ 2024, 7:11 IST
Last Updated 25 ಮೇ 2024, 7:11 IST
ಅಕ್ಷರ ಗಾತ್ರ

ಮೈಸೂರು: ‘ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಮೂರ್ಛೆ ರೋಗದಿಂದ ಮೃತಪಟ್ಟಿದ್ದಾನೆಯೇ ವಿನಃ ಅದು ಲಾಕಪ್‌ ಡೆತ್ ಅಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಪೊಲೀಸರು ಆ ವ್ಯಕ್ತಿಯನ್ನು ಎಫ್ಐಆರ್ ಇಲ್ಲದೆ ಠಾಣೆಗೆ ಕರೆತಂದಿದ್ದು ತಪ್ಪು. ಈ ತಪ್ಪಿಗಾಗಿ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಆದೇಶಿಸಿದ್ದೇನೆ. ಆ ಘಟನೆಯು ಲಾಕಪ್ ಡೆತ್ ಅಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT