ಮೈಸೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿ ಸ್ನೇಹಮಯಿ ಕೃಷ್ಣಗೆ ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿ ಗುರುವಾರ ಆದೇಶಿಸಿತು.

ಕೃಷ್ಣ 2015ರಲ್ಲಿ ಲಲಿತಾದ್ರಿಪುರದ ಕುಮಾರ್ ಎಂಬವರಿಂದ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪ ಸಾಬೀತಾಗಿದ್ದರಿಂದ ಶಿಕ್ಷೆ ಪ್ರಕಟಿಸಿದೆ. ಆದರೆ ಶಿಕ್ಷೆಯ ಪ್ರಮಾಣ ಪ್ರಕಟಿಸಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ, ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.