ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಿಗ್ಗೆ 11.40ಕ್ಕೆ ವರುಣ ವಿಧಾನಸಭಾ ಕ್ಷೇತ್ರದ, ಮೈಸೂರು ತಾಲ್ಲೂಕಿನ ಪಿಲ್ಲಹಳ್ಳಿ ಗ್ರಾಮಕ್ಕೆ ಹೆಲಿಕಾಪ್ಟರ್ನಲ್ಲಿ ಬಂದಿಳಿಯುವರು. ಆ ಗ್ರಾಮದಲ್ಲಿ ದಂಡಿಮಾರಮ್ಮ ಹಾಗೂ ಸಿದ್ದಪ್ಪಾಜಿ ಸೇವಾ ಸಮಿತಿಯಿಂದ ಆಯೋಜಿಸಿರುವ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 1ಕ್ಕೆ ಅಲ್ಲಿಂದ ಹೆಲಿಕಾಪ್ಟರ್ನಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಹೆಲಿಪ್ಯಾಡ್ಗೆ ತೆರಳುವರು. ಅಲ್ಲಿಂದ 1.40ಕ್ಕೆ ಎಚ್.ಡಿ. ಕೋಟೆ ತಾಲ್ಲೂಕಿನ ಶಿರಮಳ್ಳಿಗೆ ರಸ್ತೆ ಮಾರ್ಗವಾಗಿ ತೆರಳುವ ಅವರು, ಅಲ್ಲಿ ನಡೆಯಲಿರುವ ಲಕ್ಷ್ಮೀದೇವಿ (ಹುಚ್ಚಮ್ಮ) ಅಮ್ಮನವರ ನೂತನ ದೇವಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 3.30ರ ಸುಮಾರಿಗೆ ಕಬಿನಿ ಜಲಾಶಯದ ಹೆಲಿಪ್ಯಾಡ್ನಿಂದ ಮೈಸೂರಿನ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿಯವರು. ಅಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 5ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ತೆರಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.