ಜಯಪುರ: ಹೋಬಳಿಯ ದೊಡ್ಡಹುಂಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ಮುರುಡ ಬಸವೇಶ್ವರಸ್ವಾಮಿ ದೇವಾಲಯ ಮತ್ತು ಮಾರಮ್ಮ ದೇವಸ್ಥಾನದ ಬಾಗಿಲುಗಳ ಬೀಗ ಮುರಿದ ಕಳ್ಳರು, ಹುಂಡಿಗಳನ್ನು ಒಡೆದು ಹಣ ಕದ್ದಿದ್ದಾರೆ.

ಸೋಮವಾರ ಬೆಳಿಗ್ಗೆ ಅರ್ಚಕರು ದೇವಾಲಯಕ್ಕೆ ಬಂದ ವೇಳೆ ಕಳ್ಳತನವಾಗಿರುವುದು ಗೊತ್ತಾಗಿದೆ. ಕೂಡಲೇ ಅರ್ಚಕರು ಸ್ಥಳೀಯರಿಗೆ ಹಾಗೂ ಜಯಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ. ಮುರುಡ ಬಸವೇಶ್ವರಸ್ವಾಮಿ ದೇವಾಲಯದ ಅರ್ಚಕ ಕುಮಾರ್ ಅವರು ಕಳ್ಳತನವಾಗಿರುವ ಬಗ್ಗೆ ಠಾಣೆಗೆ ದೂರು ನೀಡಿದ್ದು, ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಎಸ್ಐ ಪ್ರಕಾಶ್ ಯತ್ತಿನಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-51-526181853

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.