ನಂಜನಗೂಡು: ಹೆಣ್ಣುಮಕ್ಕಳ ಹಕ್ಕು ರಕ್ಷಣೆ ಹಾಗೂ ಅವರ ಮೇಲಿನ ದೌರ್ಜನ್ಯ ತಪ್ಪಿಸಲು ಸರ್ಕಾರ ಪೋಕ್ಸೊ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಗೊಳಿಸಿದೆ, ವಿದ್ಯಾರ್ಥಿಗಳಿಗೆ ಕಾನೂನಿನ ಅರಿವನ್ನು ಮೂಡಿಸಲಾಗುತ್ತಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಎಸ್. ಭವ್ಯಶ್ರೀ ಹೇಳಿದರು.

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ದಕ್ಷಿಣ ಕಾಶಿ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅನಕ್ಷರಸ್ಥರು ತಮ್ಮ ಜವಾಬ್ದಾರಿ ಕಳೆದುಕೊಳ್ಳಲು ಹಾಗೂ ಬಡತನ ಕಾರಣಗಳಿಂದ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮದುವೆ ಮಾಡುವುದರಿಂದ ಹೆಣ್ಣು ಮಕ್ಕಳು ಹಲವಾರು ರೀತಿಯ ತೊಂದರೆಗೊಳಗಾಗುತ್ತಿದ್ದಾರೆ. ಆದ್ದರಿಂದ ಎಲ್ಲರಿಗೂ ಕಾನೂನಿನ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ. ಬಾಲಕಿಯರು ಗರ್ಭಿಣಿ ಆಗುತ್ತಿರುವುದು ಮತ್ತು ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಇತ್ತೀಚಿಗೆ ಹೆಚ್ಚಾಗಿ ಕಂಡು ಬರುತ್ತಿದೆ ಎಂದರು.

ಹದಿಹರೆಯದ ವಯಸ್ಸಿನಲ್ಲಿ ಅಕ್ರಮ ಚಟುವಟಿಕೆಗಳ ಕಡೆ ಗಮನ ಹರಿಸಬಾರದು, ಮಕ್ಕಳ ಲೈಂಗಿಕ ಚಿತ್ರಗಳನ್ನು, ದೃಶ್ಯಗಳನ್ನು ಇಟ್ಟುಕೊಳ್ಳುವುದು, ಮಕ್ಕಳನ್ನು ಲೈಂಗಿಕ ದೃಷ್ಟಿಯಿಂದ ನೋಡುವುದು, ಅಶ್ಲೀಲ ಚಿತ್ರಗಳನ್ನು, ವಾಕ್ಯಗಳನ್ನು ಮಕ್ಕಳಿಗೆ ತೋರಿಸುವುದು, ಅವರೊಂದಿಗೆ ಅಶ್ಲೀಲವಾಗಿ ಮಾತನಾಡುವುದು ಅಪರಾಧ ಆಗುತ್ತದೆ. ರಸ್ತೆ ಬದಿಯಲ್ಲಿ ಹೋಗುವ ಸಂದರ್ಭದಲ್ಲಿ ಯಾರಾದರೂ ಯಾವುದೇ ವ್ಯಕ್ತಿ ರೇಗಿಸುವುದು, ಕಾಟ ಕೊಡುವುದು, ಹಿಂದೆ ಸುತ್ತಾಡುವುದು ಕಂಡುಬಂದಲ್ಲಿ ಪೋಷಕರಿಗೆ ಅಥವಾ ಮಕ್ಕಳ ಸಹಾಯವಾಣಿ 1098ಕ್ಕೆ ತಕ್ಷಣ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಚಂದ್ರಶೇಖರ್ ಬಾಬು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಕುಮಾರ್, ದಕ್ಷಿಣ ಕಾಶಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶಿವಕುಮಾರ್, ಟ್ರಸ್ಟ್ ನಿರ್ದೇಶಕ ಸಿ. ಮಂಜುನಾಥ್, ಪ್ರೊ. ಎಂ.ಎನ್ ಮಹದೇವಯ್ಯ, ನಾರಾಯಣಸ್ವಾಮಿ, ರಾಘವೇಂದ್ರ, ಶಿವಕುಮಾರ್, ಚಿನ್ನಸ್ವಾಮಿ, ರಂಜನ, ನಟರಾಜು, ರಾಜಣ್ಣ, ನಂಜುಂಡಯ್ಯ ಉಪಸ್ಥಿತರಿದ್ದರು.

‘ಮೊಬೈಲ್ ಫೋನ್ ಗೀಳು ಬೇಡ’

ದಕ್ಷಿಣ ಕಾಶಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಸಿ.ಎಂ ಸುಗಂಧರಾಜು ಮಾತನಾಡಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ತಾಲ್ಲೂಕಿನ ಪ್ರೌಢಶಾಲೆ ಮತ್ತು ಸರ್ಕಾರಿ ಪಿಯು ಕಾಲೇಜುಗಳಲ್ಲಿ ದಕ್ಷಿಣ ಕಾಶಿ ಚಾರಿಟೇಬಲ್ ಟ್ರಸ್ಟ್ ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಫೋನ್ನಿಂದಲೇ ಇಂದು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಮೊಬೈಲ್ ಎಂಬುದು ಒಂದು ದೊಡ್ಡ ಮಾಯಾಜಾಲ. ಅದರ ಗೀಳಿಗೆ ಬೀಳದೆ ಮೊಬೈಲನ್ನು ಜ್ಞಾನಕ್ಕಾಗಿ ಮಾತ್ರ ಬಳಸಬೇಕು. ಮೊಬೈಲ್ ಹೆಚ್ಚಾಗಿ ಬಳಸುವುದರಿಂದ ವಿದ್ಯಾರ್ಥಿಗಳ ಜೀವನ ಹಾಳಾಗುತ್ತದೆ. ಪುಸ್ತಕಗಳನ್ನು ವಿದ್ಯಾರ್ಥಿಗಳು ಹೆಚ್ಚು ಓದಿದಾಗ ಮಾತ್ರ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬಹುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.