ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮಾನುಸಾರ ಪಟ್ಟಿ ಪ್ರಕಟ: ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ

Published 2 ಮೇ 2024, 19:16 IST
Last Updated 2 ಮೇ 2024, 19:16 IST
ಅಕ್ಷರ ಗಾತ್ರ

ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ನೀಡಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಕರ್ನಾಟಕ ಲೋಕಸೇವಾ ಆಯೋಗದ ಮೀಸಲಾತಿ ನಿಯಮಾನುಸಾರವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಪ್ರಕಟಿಸಲಾಗಿದೆ ಎಂದು ಕೇಂದ್ರದ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಯಲ್ಲಿ ಮೇ 1ರ ಸಂಚಿಕೆಯಲ್ಲಿ ಪ್ರಕಟಗೊಂಡ ವರದಿಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ರಾಜೇಶ್‌ಕುಮಾರ್ ದರಿಯಾ ವರ್ಸಸ್‌ ರಾಜಸ್ಥಾನ ಲೋಕಸೇವಾ ಆಯೋಗದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪಿಗೆ ಅನುಗುಣವಾಗಿ ಸಮತಳ ಮೀಸಲಾತಿ ಮಾದರಿಯಲ್ಲಿ ಆಯ್ಕೆ ಮಾಡಲಾಗಿದೆ. ಅದರಂತೆ ಪರಿಶಿಷ್ಟರಲ್ಲೇ ಮೊದಲಿಗೆ ಅಂಗವಿಕಲರು, ಹಾಸ್ಟೆಲ್‌ ವಿದ್ಯಾರ್ಥಿಗಳು, ವಸತಿ ಶಾಲೆಗಳಲ್ಲಿ ಓದಿದವರು, ಮಹಿಳೆಯರು, ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಉಳಿದ ಶೇ 38ರಷ್ಟು ಸೀಟುಗಳಿಗೆ ಈ ಯಾವುದೇ ವರ್ಗದಲ್ಲಿ ಬಾರದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗಿದೆ’ ಎಂದು ಸಮಜಾಯಿಷಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT