ಮೈಸೂರು: ರಾಜ್ಯ ಸರ್ಕಾರದಿಂದ ಈಚೆಗೆ ಮಾಡಲಾದ ನಿಗಮ–ಮಂಡಳಿಗಳ ನೇಮಕಾತಿಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರು ಜಿಲ್ಲೆಗೆ ಒಂದು ಅಧ್ಯಕ್ಷ ಹಾಗೂ ಎರಡು ಉಪಾಧ್ಯಕ್ಷ ಸ್ಥಾನ ದೊರೆತಿದೆ. ಇವರಲ್ಲಿ ಇಬ್ಬರು ಮಹಿಳೆಯರು ಅವಕಾಶ ಪಡೆದಿದ್ದಾರೆ.

ಪಿರಿಯಾಪಟ್ಟಣದ ಎಚ್.ಡಿ. ಗಣೇಶ್ ಅವರನ್ನು ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ (ಮೈಲ್ಯಾಕ್) ಅಧ್ಯಕ್ಷರನ್ನಾಗಿ ಮಾಡಲಾಗಿದೆ. ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯ ರಾಜೀವನಗರದ ನಿವಾಸಿ ಪ್ಯಾರಿಜಾನ್ ಅವರಿಗೆ ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಕೆ.ಆರ್. ನಗರದವರಾದ, ಎಐಸಿಸಿ ಮಾಧ್ಯಮ ವಕ್ತಾರೆಯೂ ಆಗಿರುವ ಐಶ್ವರ್ಯಾ ಮಹದೇವ್ ಅವರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸ್ಥಾನ ಕೊಡಲಾಗಿದೆ.

ಇವರಲ್ಲಿ ಇಬ್ಬರು ಕುರುಬ ಸಮಾಜದವರು ಹಾಗೂ ಒಬ್ಬರು ಅಲ್ಪಸಂಖ್ಯಾತ ಮುಸ್ಲಿಂ ಧರ್ಮಕ್ಕೆ ಸೇರಿದವರು.

ಜೋಡೊದಲ್ಲಿ ರಾಹುಲ್ ಜೊತೆ: ಪ್ಯಾರಿಜಾನ್ ಅವರು ಕಾಂಗ್ರೆಸ್ ಸೇವಾದಳದ ಸಕ್ರಿಯ ಕಾರ್ಯಕರ್ತೆಯಾಗಿ ದುಡಿದವರು. ಅವಿವಾಹಿತೆಯಾದ ಅವರು, ನ್ಯಾಷನಲ್ ಯೂತ್ ಪ್ರಾಜೆಕ್ಟ್ನಲ್ಲಿ ಸತ್ಯ, ಏಕತೆ, ಶಾಂತಿ, ಅಹಿಂಸೆ, ದೇಶಭಕ್ತಿಯ ಸಂದೇಶ ಸಾರುವ ಕಾರ್ಯಕ್ರಮದ ಭಾಗವಾಗಿ ಶ್ರೀಲಂಕಾ, ಬಾಂಗ್ಲಾ, ನೇಪಾಳ, ಇಂಡೋನೇಷ್ಯಾ ಮೊದಲಾದೆಡೆ ನಡೆದ ಶಿಬಿರಗಳಲ್ಲಿ ಪಾಲ್ಗೊಂಡಿದ್ದಾರೆ. ಮಾರ್ಷಲ್ ಆರ್ಟ್ಸ್, ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪಡೆದವರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2022ರಲ್ಲಿ ನಡೆಸಿದ ‘ಭಾರತ್ ಜೋಡೊ’ ಯಾತ್ರೆಯಲ್ಲಿ ಅವರೊಂದಿಗೆ ಕರ್ನಾಟಕದ ಐವರು 136 ದಿನವೂ ಹೆಜ್ಜೆ ಹಾಕಿದ್ದರು. ಅವರಲ್ಲಿ ಮೈಸೂರಿನ ಪ್ಯಾರಿಜಾನ್ ಒಬ್ಬರು. ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪಾದಯಾತ್ರೆಯಲ್ಲಿ ಭಾಗಿಯಾಗಿ ಗಮನಸೆಳೆದಿದ್ದರು. ಧ್ವಜಾರೋಹಣ ಹಾಗೂ ಧ್ವಜವನ್ನು ಅಲ್ಲಿವರೆಗೂ ತೆಗೆದುಕೊಂಡು ಹೋಗುವ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಪಕ್ಷದಲ್ಲಿ ಗುರುತಿಸಿಕೊಂಡವರು.

ಕೆಲಸಕ್ಕೆ ಮನ್ನಣೆ: ‘40 ವರ್ಷಗಳಿಂದ ಪಕ್ಷದಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಸೇವಾದಳ ರಾಜ್ಯ ಘಟಕದ ಅಧ್ಯಕ್ಷೆಯಾಗಿದ್ದೆ. ಈಗ ಎಐಸಿಸಿ ಸೇವಾದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಪ್ರಭಾರಿಯಾಗಿ ಕೆಲಸ ಮಾಡುತ್ತಿದ್ದೇನೆ. ಇದೆಲ್ಲವನ್ನೂ ಗಮನಿಸಿ ವರಿಷ್ಠರು ಅವಕಾಶ ಕೊಟ್ಟಿದ್ದಾರೆ. ಕೆಲವೇ ದಿನಗಳಲ್ಲಿ ಜವಾಬ್ದಾರಿ ಸ್ವೀಕರಿಸಲಿದ್ದೇನೆ’ ಎಂದು ಪ್ಯಾರಿಜಾನ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಎಚ್.ಡಿ. ಗಣೇಶ್ ಅವರು ಮೊದಲಿಗೆ ಎರಡು ಬಾರಿ ಬಿಜೆಪಿಯಿಂದ, ನಂತರ ಒಮ್ಮೆ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ನಂತರ ಕಾಂಗ್ರೆಸ್ ಸೇರ್ಪಡೆಯಾಗಿ ದುಡಿದಿದ್ದಾರೆ. ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಅವರು, ಪಿರಿಯಾಪಟ್ಟಣ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರೂ ಹೌದು. ಅವರು ‘ಮೈಲ್ಯಾಕ್’ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಮಹದೇವ್ ಪುತ್ರಿ: ಐಶ್ವರ್ಯಾ ಅವರು, ಸಿದ್ದರಾಮಯ್ಯ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಹಾಗೂ ಅವರೊಂದಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಕೆ.ಆರ್. ನಗರದ ಮಾಜಿ ಶಾಸಕ ಮಂಚನಹಳ್ಳಿ ಮಹದೇವು ಅವರ ಪುತ್ರಿ. ಎಐಸಿಸಿ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೂ ಆಗಿದ್ದರು.

ಮೈಸೂರಿನಲ್ಲಿ ಈಗ, ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಹಾಗೂ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಸ್ಥಾನಗಳು ಖಾಲಿ ಇವೆ. ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರನ್ನು ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ (ಜೆಎಲ್ಆರ್) ಅಧ್ಯಕ್ಷರನ್ನಾಗಿ ಹಾಗೂ ಮಾಜಿ ಮೇಯರ್ ಅಯೂಬ್ ಖಾನ್ ಅವರನ್ನು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಹಿಂದೆಯೇ ನೇಮಿಸಲಾಗಿದೆ. ನಿಗಮ–ಮಂಡಳಿಗಳಲ್ಲಿ ನಿರ್ದೇಶಕರ ಸ್ಥಾನದ ಅವಕಾಶಕ್ಕಾಗಿ ಕಾರ್ಯಕರ್ತರು ಕಾಯುತ್ತಿದ್ದಾರೆ.

ಶ್ರಮಿಸಿದವರಿಗೆ ಅವಕಾಶ: ಬಿಜೆವಿ ‘ನೇಮಕಾತಿಯಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಆದ್ಯತೆ ನೀಡಿದೆ. ಮುಂದೆ ನಿರ್ದೇಶಕರ ಸ್ಥಾನಗಳಿಗೆ ನೇಮಕದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದವರು ಅವಕಾಶ ವಂಚಿತರಿಗೆ ಆದ್ಯತೆ ದೊರೆಯಲಿದೆ. ಇತ್ತೀಚೆಗೆ ಸೇರ್ಪಡೆ ಆದವರಿಗಿಂತ ದಶಕಗಳಿಂದ ಪಕ್ಷಕ್ಕಾಗಿ ಶ್ರಮಿಸಿದವರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದ್ದೇನೆ’ ಎಂದು ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.