‘ ಈ ಬಾರಿ ಉತ್ತಮ ಮಳೆಯಿಂದಾಗಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ 150 ಟಿಎಂಸಿ ನೀರು ಹೆಚ್ಚುವರಿಯಾಗಿ ಹರಿದಿದೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ 11-12 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿ ಆಗಿದೆ. ಎನ್‌ಡಿಆರ್‌ಎಫ್– ಎಸ್‌ಡಿಆರ್‌ಎಫ್ ನಿಯಮಾವಳಿಯಂತೆ ರೈತರ ಖಾತೆಗೆ ಪರಿಹಾರ ಜಮೆ ಆಗುತ್ತಿದ್ದು, ವಾರ- ಹದಿನೈದು ದಿನದಲ್ಲಿ ಈ ಪ್ರಕ್ರಿಯೆ ಮುಗಿಯಲಿದೆ’ ಎಂದು ಸಿದ್ದರಾಮಯ್ಯ ತಿಳಿಸಿದರು.