ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.31ರಿಂದ ಸೆ.2ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

31ರಂದು ಬೆಳಿಗ್ಗೆ 10.55ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು. ನಂತರ, ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಚಲನಚಿತ್ರ ನಿರ್ಮಾಪಕ, ವಿಧಾನಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3ಕ್ಕೆ ರಸ್ತೆ ಮಾರ್ಗವಾಗಿ ನಂಜನಗೂಡಿಗೆ ತೆರಳುವರು. ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದ ಆವರಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿರುವ ಭಗೀರಥ ಜಯಂತ್ಯುತ್ಸವ ಹಾಗೂ ಉಪ್ಪಾರ ಸಮುದಾಯ ಭವನದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಂಜೆ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು.

ಸೆ.1ರಂದು ಬೆಳಿಗ್ಗೆ 10.50ಕ್ಕೆ ಹುಟ್ಟೂರಾದ ತಾಲ್ಲೂಕಿನ ಸಿದ್ದರಾಮನಹುಂಡಿಗೆ ತೆರಳುವರು. ಅಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಗ್ರಾಮದ ‘ಪಿಎಂಶ್ರೀ– ಕರ್ನಾಟಕ ಪಬ್ಲಿಕ್ ಶಾಲೆ’ಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಾಲಾ ಕಟ್ಟಡವನ್ನು ಉದ್ಘಾಟಿಸುವರು. ಮಧ್ಯಾಹ್ನ 12.30ಕ್ಕೆ ಅಲ್ಲಿಂದ ತೆರಳುವರು.

ಮಧ್ಯಾಹ್ನ 3.10ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬರಮಾಡಿಕೊಳ್ಳುವರು. ಮಧ್ಯಾಹ್ನ 3.45ಕ್ಕೆ ಮಾನಸಗಂಗೋತ್ರಿಯ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯ ನೈಮಿಶಾಮ್ ಕ್ಯಾಂಪಸ್ನಲ್ಲಿ ಆಯೋಜಿಸಿರುವ ಸಂಸ್ಥೆಯ ವಜ್ರ ಮಹೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿಯೊಂದಿಗೆ ಭಾಗವಹಿಸುವರು. ಬಳಿಕ ನಗರದಲ್ಲಿ ವಾಸ್ತವ್ಯ ಹೂಡುವರು.

ಸೆ.2ರಂದು ಬೆಳಿಗ್ಗೆ 10ಕ್ಕೆ ಸರ್ಕಾರಿ ಅತಿಥಿ ಗೃಹಕ್ಕೆ ತೆರಳುವರು. ಅಲ್ಲಿಂದ ರಾಷ್ಟ್ರಪತಿಯವರಿಗೆ ಬೀಳ್ಕೊಡುಗೆ ನೀಡುವರು. ನಂತರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಧ್ಯಾಹ್ನ 12.25ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.